'ಸಾಹಿತಿಗಳಿಗೆ ನೆರವು ಅಗತ್ಯ'
ಚನ್ನಪಟ್ಟಣ: ಸಾಹಿತ್ಯ ಕ್ಷೇತ್ರದಲ್ಲಿ ಅದಮ್ಯ ಸೇವೆ ಮಾಡುತ್ತ ಎಲೆಮರೆಕಾಯಿಯಂತೆ ಜೀವನ ನಡೆಸುತ್ತಿರುವ ಆರ್ಥಿಕವಾಗಿ ಹಿಂದುಳಿದಿರುವ ಸಾಹಿತಿಗಳನ್ನು ಗುರುತಿಸಿ ಸರ್ಕಾರ ಅವರಿಗೆ ಆರ್ಥಿಕ ನೆರವು ನೀಡ ಬೇಕೆಂದು ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಟಿ.ನಾಗೇಶ್ ಒತ್ತಾಯ ಮಾಡಿದರು. ಜಿಲ್ಲಾ ಕಸಾಪ ಕಾರ್ಯಕಾರಿ ಸಮಿತಿ ತೀರ್ಮಾನದಂತೆ 3ನೇ ಕನ್ನಡ ಸಾಹಿತ್ಯ ಜಿಲ್ಲಾ ಸಮ್ಮೇಳನದ ಅಧ್ಯಕ್ಷೆಯಾಗಿದ್ದ ತಾಲೂಕಿನ ಮತ್ತಿಕೆರೆ ಗ್ರಾಮದ ಸರಸ್ವತಿಗೌಡ ಅವರಿಗೆ ಚೆಕ್ ವಿತರಣೆ ಮಾಡಿ ಮಾತನಾಡಿದ ಅವರು ಕೆಲವು ಸಾಹಿತಿಗಳು ಅನಾರೋಗ್ಯದಿಂದ ಬಳಲುತ್ತಿದ್ದು ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸ ಬೇಕು ಎಂದು ಅಭಿಪ್ರಾಯಪಟ್ಟ ಅವರು ಸಾಹಿತಿಗಳು ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಕನ್ನಡ ಸಾಹಿತ್ಯ ಪರಿಷತತ್ನೀಡುವ ಆರ್ಥಿಕ ನೆರವನ್ನು ಸದ್ಬಳಿಕೆ ಮಾಡಿಕೊಂಡು ಬೇಗ ಗುಣಮುಖರಾಗಬೇಕೆಂದು ಆಶಿಸಿದರು. ಇತ್ತಿಚಿನ ದಿನಗಳಲ್ಲಿ ಪುಸ್ತಕ ಕೊಂಡು ಓದುವವರ ಸಂಖ್ಯೆ ಕ್ಷೀಣವಾಗುತ್ತಿದೆ ಎಂದು ವಿಷಾದಿಸಿದರು.