ಕಾನೂನು ಸಾಕ್ಷರತಾ ರಥ
ಮಾಗಡಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಮಾಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ, ತಾಲೂಕು ಪಂಚಾಯ್ತಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಮಾಜ ಕಲ್ಯಾಧಿಕಾರಿ ಕಚೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಸಂಯುಕ್ತಾಶ್ರಯದಲ್ಲಿ ಸಂಚಾರಿ ಲೋಕ ಅದಾಲತ್ ಮತ್ತು ಕಾನೂನು ಸಾಕ್ಷರತಾ ರಥ ಕಾರ್ಯಕ್ರಮವನ್ನು ಜು.18 ರಿಂದ 20 ರವರೆಗೆ ತಾಲೂಕಿನ ಹೋಬಳಿ ವಾರು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ನ್ಯಾಯಾಲಯದ ಆವರಣದಲ್ಲಿ ಜು.18 ರಂದು ಬೆಳಿಗ್ಗೆ 9 ಗಂಟೆಗೆ ಪ್ರಧಾನ ಸಿವಿಲ್ ನ್ಯಾಯಧೀಶೆ ಎಸ್. ಶ್ಯಾಮಲ ಉದ್ಘಾಟಿಸಲಿದ್ದಾರೆ. ನ್ಯಾಯಧೀಶೆ ಎನ್.ಡಿ. ಮಾಲ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ವಕೀಲರು ಭಾಗವಹಿಸಲಿದ್ದಾರೆ.