ತಾಲೂಕು ಮಟ್ಟದ ಚೆಸ್ ಪಂದ್ಯಾವಳಿ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಚೆಸ್ ಅಸೋಸಿಯೇಷನ್ ನೇತೃತ್ವದಲ್ಲಿ ತಾಲೂಕು ಮಟ್ಟದ ಚೆಸ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ. ಜು.20ರ ಶನಿವಾರ ಮತ್ತು 21 ಭಾನುವಾರ ಇಲ್ಲಿನ ಕನ್ನಡ ಜಾಗೃತ ಭವನದಲ್ಲಿ ನಡೆಯಲಿದೆ. 16 ವರ್ಷದೊಳಗಿನ ಮಕ್ಕಳು ಮತ್ತು 16 ವರ್ಷ ಮೇಲ್ಪಟ್ಟ ಪುರುಷರ ವಿಭಾಗ ಸೇರಿದಂತೆ 2 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ವಿಜೇತರಿಗೆ ಆಕರ್ಷಕ ಟ್ರೋಫಿ ಮತ್ತು ಬಹುಮಾನ ನೀಡಲಾಗುವುದು. ವಿವರಗಳಿಗೆ ರಮೇಶ್(9036320057) ಅಥವಾ ಬಾಬು(9964220278) ಸಂಪರ್ಕಿಸಬಹುದು