ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ ಇಂದು
ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಆ. 3ರಂದು ನಡೆಯಲಿರುವ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಜು. 19ರ ಶುಕ್ರವಾರ ಸಂಜೆ 4 ಗಂಟೆಗೆ ಕನ್ನಡ ಜಾಗೃತ ಭವನದಲ್ಲಿ ನಡೆಯಲಿದೆ. ವಿವಿಧ ಕನ್ನಡಪರ ಸಂಘಟನೆಗಳು, ಜನಪ್ರತಿನಿಧಿಗಳು, ಸಾಹಿತ್ಯಾಸಕ್ತರು ಸಭೆಯಲ್ಲಿ ಭಾಗವಹಿಸುವಂತೆ ಕಸಾಪ ತಾ.ಕಾರ್ಯದರ್ಶಿ ಪ್ರವೀಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.