ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

'ತೆರಿಗೆ ವಸೂಲಾತಿಗೆ ಪಿಡಿಒಗಳ ಜತೆಗೆ ಜನಪ್ರತಿನಿಧಿಗಳೂ ಕೈಜೋಡಿಸಲಿ'

Rashmi Kasaragodu
Updated On : 20 Jul 2013, 12:57 pm

ರಾಮನಗರ: ತೆರಿಗೆ ವಸೂಲಾತಿಗೆ ಪಿಡಿಒಗಳ ಜತೆಗೆ ಜನಪ್ರತಿನಿಧಿಗಳೂ ಕೈಜೋಡಿಸಿದಲ್ಲಿ ನಿರೀಕ್ಷಿತ ಪ್ರಮಾಣದ ಗ್ರಾಮೀಣಾಭಿವೃದ್ಧಿ ಸಾಧ್ಯವಾಗಲಿದೆ ಎಂದು ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
ನಗರಸಭೆ ಸಭಾಂಗಣದಲ್ಲಿ ನಡೆದ ತಾಲೂಕಿನ ಗ್ರಾ.ಪಂ. ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶೇ.20ರಷ್ಟು ಮಾತ್ರವೇ ತೆರಿಗೆ ವಸೂಲಾತಿ ಆಗುತ್ತಿದೆ. ಇದರ ಪ್ರಮಾಣ ಹೆಚ್ಚಾಗದಿದ್ದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಿರ್ವಹಿಸಲು ಅಸಾಧ್ಯ ಎಂದರು.
ಪಿಡಿಒಗಳು ಹಾಗೂ ಅಧ್ಯಕ್ಷರು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಿ, ಗ್ರಾ.ಪಂ. ಅಭಿವೃದ್ಧಿಗೆ ಶ್ರಮಿಸಬೇಕು. ಆಡಳಿತ ವಿಕೇಂದ್ರೀಕರಣಕ್ಕೆ ಪೂರಕವಾಗಿ ಗ್ರಾ.ಪಂ.ಗೆ ತೆರಿಗೆ ನಿಗದಿಪಡಿಸುವ ಅಧಿಕಾರವನ್ನು ಸರಕಾರ ಒದಗಿಸಿದ್ದು, ಹಕ್ಕನ್ನು ಸಮರ್ಪಕವಾಗಿ ಬಳಸಿಕೊಂಡು ಅರ್ಹರಿಗೆ ನೆರವು ನೀಡುವ ಮೂಲಕ ಅಭಿವೃದ್ಧಿ ಸಾಧಿಸಬೇಕು ಎಂದು ಹೇಳಿದರು.
ಗ್ರಾ.ಪಂ.ಗಳಲ್ಲಿ ವಿವಿಧ ಯೋಜನೆಗಳಡಿ ನಿರ್ವಹಿಸುವ ಕಾಮಗಾರಿ ಬಿಲ್ಲುಗಳಲ್ಲಿ ಕಟಾಯಿಸುವ ಆದಾಯ ತೆರಿಗೆ, ಮಾರಾಟ ತೆರಿಗೆ ಹಾಗೂ ರಾಜಧನ ಇತ್ಯಾದಿಗಳನ್ನು ಆಯಾ ಇಲಾಖಾ ಲೆಕ್ಕ ಶೀರ್ಷಿಕೆಗಳಿಗೆ ತಿಂಗಳ 8ರೊಳಗೆ ಜಮಾ ಮಾಡಿ ಜಿ.ಪಂ.ಗೆ ವರದಿ ನೀಡಬೇಕೆಂದು ತಾಕೀತು ಮಾಡಿದರು.
ಸಭೆಯಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಡಾ.ಸಿ.ಸಿದ್ದರಾಮಯ್ಯ ತಾ.ಪಂ. ಇಒ ಕೆ.ಸಿ.ನಾರಾಯಣಸ್ವಾಮಿ, ಎಇಇ ಶ್ರೀನಿವಾಸ್ ಸೇರಿದಂತೆ ಗ್ರಾ.ಪಂ. ಅಧ್ಯಕ್ಷರು, ಪಿಡಿಒಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement