ವಿಮಾನ ನಿಲ್ದಾಣಕ್ಕೆ ಕೆಂಪೇಗೌಡಹೆಸರಿಡುವ ನಿರ್ಧಾರಕ್ಕೆ ಎಚ್ಚೆಮ್ಕೆ ಸ್ವಾಗತ
ಮಾಗಡಿ: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಬೇಕೆಂದು ಕೇಂದ್ರ ಸರ್ಕಾರ ನಿರ್ಧರಿಸಿರುವುದನ್ನು ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಎಂ. ಕೃಷ್ಣಮೂರ್ತಿ ಸ್ವಾಗತಿಸಿದ್ದಾರೆ.
ಕೆಂಪೇಗೌಡ ಅಭಿವೃದ್ಧಿ ಸಮಿತಿ ನೇತೃತ್ವವದಲ್ಲಿ ಸಾಹಿತಿಗಳು, ಚಿಂತಕರು, ಅಭಿಮಾನಿಗಳು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರಿಡುವಂತೆ ಒತ್ತಾಯಿಸುವ ಮೂಲಕ ಸರ್ಕಾರವನ್ನು ಆಗ್ರಹಿಸಲಾಗಿತ್ತು. ಸತತ ಬೇಡಿಕೆಗಳ ಹಿನ್ನೆಲೆಯಲ್ಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಹೆಸರು ಉಳಿಸುವ ಸದುದ್ದೇಶದ ಕನಸು ಇದೀಗ ನನಸಾಗಿದೆ ಎಂದು ಎಚ್.ಎಂ. ಕೃಷ್ಣಮೂರ್ತಿ ತಿಳಿಸಿದರು.
2002 ರಲ್ಲಿ ಕೆಂಪೇಗೌಡ ಅಭಿವೃದ್ಧಿ ಸಮಿತಿ ರಚಿಸಿಕೊಂಡು ತಾಲೂಕಿನಲ್ಲಿ ನಾಡಪ್ರಭು ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ಸ್ಥಾಪಿಸುವ ಮೂಲಕ ಪ್ರತಿ ವರ್ಷವೂ ಜಯಂತಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.