ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಅಮಾನತ್ ಬ್ಯಾಂಕ್ ಅವ್ಯವಹಾರ ಸಿಬಿಐ ತನಿಖೆಗೆ ಒತ್ತಾಯ

Rashmi Kasaragodu
Updated On : 22 Jul 2013, 1:22 am

ಬೆಂಗಳೂರು: ಅಮಾನತ್ ಕೋ-ಆಪರೇಟಿವ್ ಬ್ಯಾಂಕ್ನಲ್ಲಿ ನಡೆದಿರುವ ಅವ್ಯವಹಾರಗಳನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೇಂದ್ರದ ಮಾಜಿ ಸಚಿವ ಜಾಫರ್ ಷರೀಫ್ ನೇತೃತ್ವದ ಮುಸ್ಲಿಂ ಮುಖಂಡರ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ.
ಅದೇ ರೀತಿ ಅವ್ಯವಹಾರಗಳು ನಡೆದಿರುವ ಹಿನ್ನೆಲೆಯಲ್ಲಿ ಅಮಾನತ್ ಕೋ-ಆಪರೇಟಿವ್ ಬ್ಯಾಂಕ್ ಹಾಗೂ ಅದಕ್ಕೆ ಸಂಬಂಧಿಸಿದ ಇತರೆ ಸಂಘ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಬೇಕು. ಈ ಕುರಿತು ರಿಸರ್ವ್ ಬ್ಯಾಂಕ್ ನೀಡಿರುವ ಸೂಚನೆಗಳನ್ನು ಪಾಲಿಸಬೇಕು ಎಂದೂ ಆಗ್ರಹಿಸಿದೆ. ಜಾಫರ್ ಷರೀಫ್, ಸಿ.ಎಂ. ಇಬ್ರಾಹಿಂ, ರೋಷನ್ ಬೇಗ್, ನಸೀರ್ ಅಹಮದ್ ಸೇರಿದಂತೆ ಮುಸ್ಲಿಂ ಸಮುದಾಯದ ಕೆಲ ಮುಖಂಡರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಕುರಿತಂತೆ ಸುದೀರ್ಘ ಸಮಾಲೋಚನೆ ನಡೆಸಿದರು. ಅಲ್ಲದೆ, ಅಮಾನತ್ ಕೋ-ಆಪರೇಟಿವ್ ಬ್ಯಾಂಕ್ ಉತ್ತಮವಾಗಿ ಕಾರ್ಯನಿರ್ವಹಿಸಲು ಬೇಕಾದ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದರು.
ಬ್ಯಾಂಕ್ನಲ್ಲಿ ನಡೆದಿರುವ ಅವ್ಯವಹಾರದ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿ ನೇಮಿಸಿ ಬ್ಯಾಂಕಿನ ಆಡಳಿತವನ್ನು ತಹಬದಿಗೆ ತರುವಂತೆ ಆರ್ಬಿಐ ಸೂಚನೆ ನೀಡಿದೆ. ಈ ಸೂಚನೆ ಪಾಲಿಸಬೇಕು. ಜತೆಗೆ ಬ್ಯಾಂಕ್ನಲ್ಲಿ ನಡೆದಿರುವ ಅವ್ಯವಹಾರದ ಮೊತ್ತ ಒಂದು ಕೋಟಿ ರುಪಾಯಿಗಿಂತಲೂ ಹೆಚ್ಚಾಗಿರುವುದರಿಂದ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement