ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಸಾಂಪ್ರದಾಯಿಕ ಕೃಷಿಯಿಂದ ಲಾಭ ಕಮ್ಮಿ

Rashmi Kasaragodu
Updated On : 22 Jul 2013, 1:23 am

ಕ.ಪ್ರ.ವಾರ್ತೆ, ರಾಮನಗರ, ಜು.20
ನಗರ ಪ್ರದೇಶದೆಡೆಗೆ ಆಕರ್ಷಿತರಾಗಿರುವ ಯುವಜನರು ವ್ಯವಸಾಯ ಕ್ಷೇತ್ರದಿಂದ ವಿಮುಖರಾಗುತ್ತಿದ್ದಾರೆ. ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಹೆಚ್ಚಿನ ಲಾಭ ಸಿಗದಿರುವುದೇ ಇದಕ್ಕೆ ಕಾರಣವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ. ಬಸವರಾಜು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಗಳ ಸಭೆಯಲ್ಲಿ ಮಾತನಾಡಿ, ರೈತರು ದೇಶದ ಬೆನ್ನೆಲುಬಾಗಿದ್ದು, ಯುವಜನರು ಕೃಷಿ ತೊರೆಯದಂತೆ ತಡೆಯುವುದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಹೇಳಿದರು. ಜಿಲ್ಲೆಯ ರೈತರು ಕೃಷಿ ಕ್ಷೇತ್ರದಲ್ಲಿ ಹೆಚ್ಚು ಆದಾಯ ಗಳಿಸಲು ಲಾಭದಾಯಕ ಹಾಗೂ ನಷ್ಟ ಉಂಟಾಗದ ಹೊಸ ಹೊಸ ಬೆಳೆ ಪರಿಚಯಿಸಬೇಕು. ಹಾಗೂ ನೂತನ ತಂತ್ರಜ್ಞಾನ ಬಳಸಿಕೊಳ್ಳುವಂತೆ ಸಲಹೆ ನೀಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ರೈತರು ವ್ಯವಸಾಯ ಕ್ಷೇತ್ರ ತೊರೆದರೆ ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳಿಗೆ ಅಭಾವ ಉಂಟಾಗಿ, ಬೇರೆ ದೇಶಗಳ ಮೇಲೆ ಅವಲಂಬಿತರಾಗಬೇಕಾದ ದುಃಸ್ಥಿತಿ ನಿರ್ಮಾಣವಾಗಲಿದೆ. ಈಗಲೇ ಗಂಭೀರ ಚಿಂತನೆ ನಡೆಸಿ ಆಹಾರ ಧಾನ್ಯಗಳ ಜತೆಗೆ ತೋಟಗಾರಿಕಾ ಬೆಳೆಗಳಾದ ಪಪ್ಪಾಯಿ, ಸಪೋಟದಂತಹ ಲಾಭದಾಯಕ ಬೆಳೆ ಬೆಳೆಯುವಂತೆ ರೈತರನ್ನು ಉತ್ತೇಜಿಸಬೇಕು ಎಂದರು. ಜಿಲ್ಲೆಯು ರಾಜಧಾನಿಗೆ ನೆರೆಯ ಜಿಲ್ಲೆಯಾಗಿರುವುದರಿಂದ ಮಾರುಕಟ್ಟೆಗೆ ಯಾವುದೇ ತೊಂದರೆ ಇರುವುದಿಲ್ಲ. ತರಕಾರಿ, ತೋಟಗಾರಿಕೆ, ರೇಷ್ಮೆ ಹಾಗೂ ಕೈಗಾರಿಕೆಗೆ ಒತ್ತು ನೀಡಬೇಕು. ರೈತರಿಗೆ ಕಡಿಮೆ ಅವಧಿಯ ಲಾಭದಾಯಕ ಬೆಳೆ ಬೆಳೆಯಲು ಅರಿವು ಮೂಡಿಸಿ, ಪ್ರೋತ್ಸಾಹಿಸುವ ಜೊತೆಗೆ ಸರ್ಕಾರದ ಎಲ್ಲಾ ಸೌಲಭ್ಯ ಒದಗಿಸುವಂತೆ ಹೇಳಿದರು.
ರೈತರಿಗೆ ನೀಡಲಾಗುತ್ತಿರುವ ಸಹಾಯಧನವನ್ನು ಕಡ್ಡಾಯವಾಗಿ ಬ್ಯಾಂಕ್ ಖಾತೆ ಮೂಲಕವೇ ಒದಗಿಸಬೇಕು. ಇದರಿಂದ ಹಣ ದುರುಪಯೋಗವಾಗುವುದನ್ನು ತಡೆಗಟ್ಟಬಹುದು. ರೈತರಿಗೆ ಶೂನ್ಯ ಪ್ರಾರಂಭಿಕ ಶುಲ್ಕದೊಂದಿಗೆ ಬ್ಯಾಂಕ್ ಖಾತೆ ತೆರೆಯಲು ಕ್ರಮ ಕೈಗೊಳ್ಳಬೇಕು. ಹನಿ ನೀರಾವರಿ ಯೋಜನೆಯ ಸಬ್ಸಿಡಿ ಹಣವು ರೈತರಿಗೆ ತಲುಪದಿರುವ ಬಗ್ಗೆ ನನಗೆ ಮಾಹಿತಿ ಬಂದಿದ್ದು, ಈ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ತೋಟಗಾರಿಕಾ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಇದುವರೆಗೂ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಕಳೆದ ವರ್ಷಕ್ಕಿಂತ ಪರಿಸ್ಥಿತಿ ಸುಧಾರಿಸಿದೆ. ಬಿತ್ತನೆ ಕಾರ್ಯ ಆರಂಭವಾಗಿದ್ದು, ಶೇ. 35ರಷ್ಟು ಬಿತ್ತನೆಯಾಗಿದೆ. ಒಂದೆರೆಡು ಬಾರಿ ಮಳೆ ಬಿದ್ದರೆ ಬಿತ್ತನೆ ಕಾರ್ಯ ಚುರುಕುಗೊಳ್ಳಲಿದೆ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಅಣ್ಣಯ್ಯ ಸಭೆಗೆ ಮಾಹಿತಿ ನೀಡಿದರು.  ಜಿಲ್ಲೆಗೆ 4713 ಕ್ವಿಂಟಲ್ ಸಹಾಯಧನದ ಬಿತ್ತನೆ ಬೀಜ ನಿಗದಿಪಡಿಸಿದ್ದು, 3062 ಕ್ವಿಂಟಲ್ ಬಿತ್ತನೆ ಬೀಜ ಪೂರೈಕೆಯಾಗಿದೆ. 18 ರೈತ ಸಂಪರ್ಕ ಕೇಂದ್ರಗಳ ಮೂಲಕ ವಿತರಣೆಗೆ ಕ್ರಮ ವಹಿಸಲಾಗಿದೆ. ರಸಗೊಬ್ಬರ ಪೂರೈಕೆಯಲ್ಲೂ ಸಮಸ್ಯೆ ಇಲ್ಲ ಎಂದು ವಿವರಿಸಿದರು.


ರೈತರು ವ್ಯವಸಾಯ ಕ್ಷೇತ್ರ ತೊರೆದರೆ ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳಿಗೆ ಅಭಾವ ಉಂಟಾಗಿ, ಬೇರೆ ದೇಶಗಳ ಮೇಲೆ ಅವಲಂಬಿತರಾಗಬೇಕಾದ ದುಃಸ್ಥಿತಿ ನಿರ್ಮಾಣವಾಗಲಿದೆ. ಈಗಲೇ ಗಂಭೀರ ಚಿಂತನೆ ನಡೆಸಿ
ಟಿ  ಬಿ. ಬಸವರಾಜು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement