ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರದಲ್ಲಿ ಅನ್ನಭಾಗ್ಯಕ್ಕೆ ಚಾಲನೆ

Vishwanath S
Updated On : 24 Jul 2013, 12:51 pm

ಕ.ಪ್ರ. ವಾರ್ತೆ , ದೊಡ್ಡಬಳ್ಳಾಪುರ , ಜು.23
ಅನ್ನಭಾಗ್ಯ ಯೋಜನೆ ಬಡವರ ಪಾಲಿಗೆ ವರದಾನವಾಗಿದೆ. 1ಕ್ಕೆ 1 ಕೆಜಿ ಅಕ್ಕಿ ನೀಡುವಲ್ಲಿ ಯಾವುದೇ ಲೋಪ ಕಂಡುಬರದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ಇಲ್ಲಿನ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನ್ಯಾಯಬೆಲೆ ಅಂಗಡಿಯಲ್ಲಿ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋವುಟ್ರಿಕ್ ಜಾರಿಗೆ ಬರುತ್ತಿದ್ದಂತೆ ಪಡಿತರ ಚೀಟಿಗಳಲ್ಲಿನ ಗೊಂದಲ ನಿವಾರಣೆಯಾಗಲಿವೆ. ಈ ಸಂಬಂಧ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಕಡಿಮೆ ದರದಲ್ಲಿ ಅಕ್ಕಿ ವಿತರಣೆ ಯಶಸ್ವಿಯಾಗಲು ಎಲ್ಲರೂ ಶ್ರಮಿಸಬೇಕು. ಇದರಿಂದ ಬಡ ಕುಟುಂಬಗಳಿಗೆ ಉಪಯೋಗವಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಟಿಎಪಿಎಂಸಿಎಸ್ ಅಧ್ಯಕ್ಷ ವಿ.ಆಂಜನಪ್ಪ, ನಿರ್ದೇಶಕ ಪುಟ್ಟಬಸವರಾಜು, ನಗರಸಭಾ ಸದಸ್ಯ ವಿ.ಎಸ್. ರವಿಕುಮಾರ್, ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ತಿ.ರಂಗರಾಜು, ಕಾರ್ಯದರ್ಶಿ ಡಿ.ವಿ.ಅಶ್ವತ್ಥಪ್ಪ ಮತ್ತಿತರರು ಹಾಜರಿದ್ದರು.
ಅಭಿನಂದನೆ: ಇದೇ ಸಂದರ್ಭದಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಅವರಿಗೆ ಟಿಎಪಿಎಂಸಿಎಸ್ ವತಿಯಿಂದ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಎಪಿಎಂಸಿ ಮಾಜಿ ಅಧ್ಯಕ್ಷ ಟಿ.ವಿ. ಲಕ್ಷ್ಮೀನಾರಾಯಣ್ ಒಂದು ರು.ಗೆ ಕೆಜಿ ಅಕ್ಕಿ ನೀಡುವುದರಿಂದ ಟಿಎಪಿಎಂಸಿಎಸ್‌ಗೆ ಹೆಚ್ಚಿನ ಹೊರೆಯಾಗಲಿದೆ. ಸರ್ಕಾರ ವ್ಯವಸಾಯೋತ್ಪನ್ನ ಸಹಕಾರ ಸಂಘಗಳಿಗೆ ಬಡ್ಡಿರಹಿತ ಸಾಲ ನೀಡಿದರೆ ಮಾತ್ರ ಸಂಘಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸಲು ಸಹಕಾರ ನೀಡಿದಂತಾಗುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement