ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆ

Srinivasa Murthy VN
Updated On : 26 Jul 2013, 12:57 pm

ನೆಲಮಂಗಲ: ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಜು.27ರ ಶನಿವಾರದಂದು ಬೆ. 11 ಗಂಟೆಗೆ ಶಾಸಕರ ಅಧ್ಯಕ್ಷತೆಯಲ್ಲಿ ಭಾರತದ 67ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಅಧಿಕಾರಿಗಳು ತಪ್ಪದೆ ಖುದ್ದಾಗಿ ಹಾಜರಾಗಿ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡುವಂತೆ ತಹಶೀಲ್ದಾರ್ ವಿ.ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಸ್ಕೂರು ಕರೆಯಲ್ಲಿ ಮರಳುದಂಧೆ ನಿಲ್ಲಿಸಿ
ಮಾಗಡಿ:
ತಾಲೂಕಿನ ಬಿಸ್ಕೂರು ಕರೆಯಲ್ಲಿ ಅವ್ಯಾಹತವಾಗಿ ಮರಳು ಮಾಫಿಯ ಎಗ್ಗಿಲ್ಲದೆ ನಡೆಯುತ್ತಿದೆ. ಕೆರೆಯಂಗಳದಲ್ಲಿ ಮರಳು ದಂಧೆಯಿಂದಾಗಿ ಗುಂಡಿಗಳದ್ದೆ ಕಾರುಬಾರು. ಕೆರೆಗಳಲ್ಲಿ ಮರಳು ತೆಗೆಯದಂತೆ ಸರ್ಕಾರ ನಿಷೇಧಾಜ್ಞೆ ಜಾರಿಗೊಳಿಸಿದೆ. ಆದರೂ ಎಗ್ಗಿಲ್ಲದೆ ಬಿಸ್ಕೂರು ಕೆರೆಯಂಗಳದಲ್ಲಿ ಮರಳು ದಂಧೆ ನಡೆಯುತ್ತಿದೆ. ಮಳೆಗಾಲ ಆರಂಭಗೊಂಡಿದ್ದು, ಶಾಲಾ ಕಾಲೇಜಿಗೆ ಹೋಗುವ ಮಕ್ಕಳು ಕೆರೆಯಂಗಳದಲ್ಲಿ ಸಾಗುವಾಗ ಆಕಸ್ಮಿಕ ನೀರಿಗೆ ಇಳಿಯಲು ಹೋಗಿ ಪ್ರಾಣ ಕಳೆದುಕೊಳ್ಳುವ ಸಂಭವವಿದ್ದು, ಸಂಬಂಧಪಟ್ಟ ತಾಲೂಕು ಆಡಳಿತ ಮರಳು ಮಾಫಿಯಾ ತಡೆಗೆ ಅಗತ್ಯ ಕ್ರಮ ವಹಿಸುವಂತೆ ನಾಗರಿಕರು ಆಗ್ರಹಿಸಿದ್ದಾರೆ.

ಹಾರೋಹಳ್ಳಿಯಲ್ಲಿ ಅಹವಾಲು ಸ್ವೀಕಾರ
ರಾಮನಗರ:
ಉಪ ವಿಭಾಗದ ಲೋಕಾಯುಕ್ತ ಡಿವೈಎಸ್ಪಿ ಜು.26ರಂದು ಕನಕಪುರ ತಾಲೂಕಿನ ಹಾರೋಹಳ್ಳಿ ಗ್ರಾ.ಪಂ. ಕಚೇರಿಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಸಾರ್ವಜನಿಕರಿಂದ ಅಹವಾಲು  ಸ್ವೀಕರಿಸುವರು. ಕನಕಪುರದ ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಕೆಲಸ ಮಾಡಿಕೊಡಲು ಹಣ ಕೇಳಿದ್ದಲ್ಲಿ ಅಥವಾ ಉದ್ದೇಶಪೂರ್ವಕ ವಿಳಂಬ ಮಾಡಿದ್ದಲ್ಲಿ ಮೇಲ್ಕಂಡ ದಿನದಂದು ಖುದ್ದಾಗಿ ಅಹವಾಲು ಸಲ್ಲಿಸಬಹುದು.

19-ಆ.24ರವರೆಗೆ ನೀತಿ ಸಂಹಿತೆ
ರಾಮನಗರ:
ಬೆಂಗಳೂರು ಗ್ರಾಮಾಂತರ ಲೋಕಸಭಾ ಉಪಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜು.19 ರಿಂದ ಆ.24ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇಲಾಖಾ ಅಧಿಕಾರಿಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ಆದೇಶಿಸಿದ್ದಾರೆ. ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುವವರ ವಿರುದ್ದ ಪ್ರಜಾ ಪ್ರತಿನಿಧಿ ಕಾಯ್ದೆ 1951 ರಡಿಯಲ್ಲಿ ಕ್ರಮ ಜರುಗಿಸುವುದಾಗಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ವಿವಿಧ ಕೋರ್ಸ್ಗೆ ಪ್ರವೇಶಾತಿ
ರಾಮನಗರ:
ಕರಾಮುವಿನಿಂದ 2013-14ನೇ ಸಾಲಿನ ಬಿಎ, ಬಿಕಾಂ, ಎಂಎ, ಎಂಕಾ, ಬಿಎಲ್ಐಸಿ, ಎಂಎಲ್ಐಸಿ, ಎಂಎಸ್ಸಿ, ಬಿಎಡ್, ಎಂಬಿಎ, ಡಿಪ್ಲೊಮೋ ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಅರ್ಜಿಯನ್ನು ಆಗಸ್ಟ್ ಮೊದಲ ವಾರದಿಂದ ನಗರದ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಯಲ್ಲಿರುವ ಪ್ರಾದೇಶಿಕ ಕೇಂದ್ರದಲ್ಲಿ ವಿತರಣೆ ಮಾಡಲಾಗುವುದು. ವಿದ್ಯಾರ್ಥಿಗಳು ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಪ್ರಾದೇಶಿಕ ಕೇಂದ್ರದಲ್ಲಿ ನೀಡಿ ತಮ್ಮ ಪ್ರವೇಶಾತಿ ಪಡೆದುಕೊಳ್ಳಬಹುದು. ಪ್ರವೇಶಾತಿ ಪಡೆದ ದಿನವೇ ಗುರುತಿನ ಚೀಟಿ ಹಾಗೂ ಅಧ್ಯಯನ ಸಾಮಗ್ರಿಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ದೂ 080-27274443, 9620973666 ಸಂಪರ್ಕಿಸಬಹುದು.

ಕೆ.ಆರ್.ಪೇಟೆ ಬಂದ್ ನಾಳೆ
ಕಿಕ್ಕೇರಿ: 
ತ್ರಿವಿಧ ದಾಸೋಹಿ ಸಂಸೆ ಆದಿಚುಂಚನಗಿರಿ ಬೆಂಗಳೂರು ಶಾಖಾ ಮಠದ ಮೇಲೆ ನಡೆಸಿರುವ ಐಟಿ ದಾಳಿ ಖಂಡಿಸಿ 27ರಂದು ಕೆ.ಆರ್.ಪೇಟೆಯಲ್ಲಿ ತಾಲೂಕು ಬಂದ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಸ್ವಾಭಿಮಾನಿ ಒಕ್ಕಲಿಗರಸೇವಾ ಟ್ರಸ್ಟ್ ಅಧ್ಯಕ್ಷ ಬಸವೇಗೌಡ ಕರೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement