ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ದೇವರಾಜ ಅರಸ್ ಕಾಲೇಜಿನಲ್ಲಿ ಗಾಳಿಪಟ ಉತ್ಸವ

Srinivasa Murthy VN
Updated On : 27 Jul 2013, 12:52 pm

ದೊಡ್ಡಬಳ್ಳಾಪುರ: ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ನೇತೃತ್ವದಲ್ಲಿ ಗಾಳಿಪಟ ಉತ್ಸವ ನಡೆಯಿತು.
ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಕಾಲೇಜು, ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳು ತರಾವರಿ ಗಾಳಿಪಟಗಳೊಂದಿಗೆ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜಾಲಪ್ಪ ಕಲಾ ಮಂದಿರದ ಮುಂಭಾಗದಲ್ಲಿರುವ ಬಯಲಿನಲ್ಲಿ ವಿದ್ಯಾರ್ಥಿಗಳು ಗಾಳಿಪಟಗಳನ್ನು ಹಾರಿಸಿ ಸಂಭ್ರಮಿಸಿದರು.
ಕಾರ್ಯಕ್ರಮದಲ್ಲಿ ಎಸ್‌ಡಿಯುಐಎಂ ಪ್ರಭಾರ ಪ್ರಾಂಶುಪಾಲ ಜೆ.ವಿ.ಚಂದ್ರಶೇಖರ್, ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಶ್ರೀನಿವಾಸ್, ಪ್ರೌಢಶಾಲೆ ಮುಖ್ಯಶಿಕ್ಷಕ ವಿಜಯಕುಮಾರ್, ಎನ್‌ಎಸ್‌ಎಸ್ ಅಧಿಕಾರಿ ಎಂ.ಚಿಕ್ಕಣ್ಣ, ತಾ.ಕಸಾಪ ಅಧ್ಯಕ್ಷ ಕೆ.ಆರ್.ರವಿಕಿರಣ್, ಸಹಪ್ರಾಧ್ಯಾಪಕಿ ಪಿ.ಚೈತ್ರ, ಸಹ ಪ್ರಾಧ್ಯಾಪಕ ದಕ್ಷಿಣಾಮೂರ್ತಿ, ಅಜಯ್, ಉಮೇಶ್, ಪ್ರಕಾಶ್, ತಾವರೇನಾಯಕ್, ಆನಂದಕುಮಾರ್, ಹಿರಿಯ ಅಧ್ಯಾಪಕಿ ಗಿರಿಜಾ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement