ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಬೆಂ. ಗ್ರಾಮಾಂತರದಲ್ಲಿ ಚುನಾವಣೆ ಜ್ವರ ಶುರು

Srinivasa Murthy VN
Updated On : 27 Jul 2013, 1:22 am

ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜಿನಾಮೆಯಿಂದ ತೆರವಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮರು ಚುನಾವಣೆಗೆ ಜು.27ರಂದು ಅಧಿಸೂಚನೆ ಹೊರ ಬೀಳಲಿದ್ದು, ಇದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯೂ ಪ್ರಾರಂಭಗೊಳ್ಳಲಿದೆ.  
4 ಜಿಲ್ಲೆಗಳ 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಆ.21ರಂದು ಮರು ಚುನಾವಣೆ ನಡೆಯಲಿದೆ. ರಾಮನಗರ ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ಅವರೇ ಈಗ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವರು. ನಾಮಪತ್ರ ಸಲ್ಲಿಕೆಗೆ ಆ.3 ಕಡೆಯ ದಿನವಾಗಿದೆ. ಆ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಆ.7 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿರುತ್ತದೆ. ಈ ಕ್ಷೇತ್ರದಲ್ಲಿ 19.48 ಲಕ್ಷ ಮತದಾರರು ಇದ್ದಾರೆ.
ಆ.24ಕ್ಕೆ ಮತಗಳ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಲಿದ್ದು, ಇಡೀ ಚುನಾವಣಾ ಪ್ರಕ್ರಿಯೆ ಆ.27ಕ್ಕೆ ಅಂತ್ಯಗೊಳ್ಳಲಿದೆ. ಚುನಾವಣೆ ಹಿನ್ನೆಲೆಯಲ್ಲಿ ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು ಜಿಲ್ಲೆಗಳಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.
ಈ ಚುನಾವಣೆಯಲ್ಲಿ 2385 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಚುನಾವಣಾಧಿಕಾರಿಗಳಾಗಿದ್ದ ಅಧಿಕಾರಿಗಳೇ ಈಗ ಸಹಾಯಕ ಚುನಾವಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement