'ಯಶಸ್ಸಿಗೆ ನಿರಂತರ ಅಧ್ಯಯನ ಅಗತ್ಯ'
ಮಾಗಡಿ: ವಿದ್ಯಾರ್ಥಿಗಳು ಶ್ರಮಪಟ್ಟು ಓದಬೇಕು. ತಮ್ಮ ಮೇಲೆ ಬಹುದೊಡ್ಡ ಜವಾಬ್ದಾರಿಯಿದ್ದು, ಇದನ್ನು ತಾವೇ ರೂಪಿಸಿಕೊಳ್ಳಬೇಕು. ದುಷ್ಚಟಗಳಿಂದ ದೂರ ಊಳಿಯುವಂತೆ ನಿವೃತ್ತ ಪ್ರಾಂಶುಪಾಲ ಎಚ್.ಎಂ.ಜಗದೀಶ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ವಿದ್ಯಾರ್ಥಿಗಳು ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ತಮ್ಮ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದರು.