ಮಕ್ಕಳನ್ನು ಸೇರಿಸಿ ಸರ್ಕಾರಿ ಶಾಲೆ ಉಳಿಸುವ ಜವಾಬ್ದಾರಿ ಪೋಷಕರದ್ದು'
ಸೂಲಿಬೆಲೆ: ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ಶಾಲೆಗಳನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರ ಮೇಲಿದೆ. ಸರ್ಕಾರಿ ಶಾಲೆಗಳಲ್ಲಿ ಅನೇಕ ಸೌಲಭ್ಯಗಳು ಲಭ್ಯವಾಗುತ್ತಿದ್ದು, ಇದರತ್ತ ಹೆಚ್ಚಿನ ಗಮನಹರಿಸಬೇಕೆಂದು ಕುರಬರಹಟ್ಟಿ ಸರ್ಕಾರಿ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮುನಿರಾಜ್ ಹೇಳಿದ್ದಾರೆ.
ಸೂಲಿಬೆಲೆ ಪಟ್ಟಣದ ಕುರುಬರಹಟ್ಟಿ ಶಾಲೆಯಲ್ಲಿ ಪ್ರಾರಂಭೋತ್ಸವ ಅಂಗವಾಗಿ ಮಕ್ಕಳಿಗೆ ಸರ್ಕಾರದಿಂದ ಲಭ್ಯವಾದ ಉಚಿತ ಸಮವಸ್ತ್ರ ಹಾಗೂ ಪಠ್ಯ ಪುಸ್ತಕ ಗಳನ್ನು ವಿತರಿಸಿ ಮಾತನಾಡಿದರು. ಹಿರಿಯ ಮುಖಂಡ ಮರುವೆ ಕೃಷ್ಣಪ್ಪ ಮಾತನಾಡಿ,ಮಕ್ಕಳು ಕಲಿಕೆಯತ್ತ ಆಸಕ್ತಿವಹಿಸಿ ಪ್ರಜ್ಞಾವಂತ ವ್ಯಕ್ತಿಗಳಾಗಿ ಸಮಾಜದಲ್ಲಿ ರೂಪುಗೊಳ್ಳಬೇಕು ಎಂದರು.ಗ್ರಾಪಂ ಸದಸ್ಯ ಲಕ್ಷ್ಮಣ್, ಯುವ ಮುಖಂಡ ರಾಜು, ಆನಂದ್ ಹಾಗೂ ಮುಖ್ಯ ಶಿಕ್ಷಕಿ ಲೀಲಾವತಿ ಸೇರಿದಂತೆ ಹಲವರು ಹಾಜರಿದ್ದರು.