7ರಂದು ತಾ.ಪಂ ಸಾಮಾನ್ಯ ಸಭೆ
ಚನ್ನಪಟ್ಟಣ: ತಾ.ಪಂ ಸಾಮಾನ್ಯ ಸಭೆಯನ್ನು ಜೂ.7ರಂದು ತಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಕರೆದಿರುವುದಾಗಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ. ತಾ.ಪಂ ಅಧ್ಯಕ್ಷೆ ಶಾಂತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಿದ್ದು ಎಲ್ಲಾ ತಾ.ಪಂ ಸದಸ್ಯರು ನಾಮಿನಿ ಸದಸ್ಯರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.