ಬಸವರಾಜುಗೆ ಪಿಹೆಚ್.ಡಿ ಪದವಿ ಪ್ರದಾನ
ಚನ್ನಪಟ್ಟಣ: ರಾಮನಗರದ ಎಸ್.ಜೆ.ಪಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ತಾಲೂಕಿನ ಕೊಂಡಾಪುರ ಗ್ರಾಮದ ಬಸವರಾಜು ಕೆ.ಬಿ. ಅವರು ಕನಕಪುರದ ರೂರಲ್ ಪದವಿ ಕಾಲೇಜು ಪ್ರಾಧ್ಯಾಪಕ ಡಾ. ಎಚ್.ಎಸ್. ಭುವನೇಶ್ವರ ಅವರ ಮಾರ್ಗದರ್ಶನದಲ್ಲಿ ಸಲ್ಲಿಸಿದ ಚನ್ನಪಟ್ಟಣ, ರಾಮನಗರ ಮತ್ತು ಮಾಗಡಿ ತಾಲೂಕುಗಳ ಬೆಟ್ಟದೇವರುಗಳು-ಸಾಂಸ್ಕೃತಿಕ ಅಧ್ಯಯನ ಎಂಬ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿ ಪ್ರದಾನ ಮಾಡಿದೆ.