ಆದಾಯ ಪ್ರಮಾಣ; ಇಂದೇ ಲಭ್ಯ
ದೇವನಹಳ್ಳಿ: ಸಿಇಟಿ ಪರೀಕ್ಷೆ ಬರೆದು ಉನ್ನತ ವ್ಯಾಸಂಗಕ್ಕಾಗಿ ಅವಶ್ಯವಿರುವ ಆದಾಯ ಪ್ರಮಾಣ ಪತ್ರಕ್ಕಾಗಿ ದೇವನಹಳ್ಳಿ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿರುವ ಎಲ್ಲ ವಿದ್ಯಾರ್ಥಿಗಳಿಗೆ ಬುಧವಾರ ಬೆಳಗಿನಿಂದ ಸಂಜೆಯವರೆಗೂ ಆದಾಯ ಪ್ರಮಾಣ ಪತ್ರ ನೀಡುವಂತೆ ತಹಸೀಲ್ದಾರ್ ಅವರಿಗೆ ಸೂಚಿಸಲಾಗಿದೆ ಎಂದು ಶಾಸಕರಾದ ಪಿಳ್ಳಮುನಿಶಾಮಪ್ಪ ತಿಳಿಸಿದರು.