ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಪರಿಸರ ದಿನಾಚರಣೆ

Rashmi Kasaragodu
Updated On : 5 Jun 2013, 12:40 pm

ವಿಜಯಪುರ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಬುಧವಾರ ಬೆಳಿಗ್ಗೆ 11ಗಂಟೆಗೆ ಪರಿಸರ ಜಾಗೃತಿ ಕಾರ್ಯಕ್ರಮ ಹಾಗೂ ಖ್ಯಾತ ಪರಿಸರವಾದಿ ಕೆ.ಗುರುದೇವ್ ನೇತೃತ್ವದಲ್ಲಿ ಮಾನವ ಮತ್ತು ಪ್ರಕೃತಿ ಕುರಿತು ವಿಚಾರ ಸಂಕಿರಣ, ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪಟ್ಟಣದ ಅಯೋಧ್ಯಾನಗರ ವೈಶ್ಯ ನಗರ್ತ ಮಹಿಳಾ ಸಂಘ, ಬಾಲಕಿಯರ ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪಟ್ಟಣ ಪುರಸಭೆ ಸಹಯೋಗದೊಂದಿಗೆ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪರಿಸರ ಜಾಗೃತಿ ಮೂಡಿಸುವ ಅಂಗವಾಗಿ ಶಾಲಾ ಮಕ್ಕಳಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಾಥಾ ಕಾರ್ಯಕ್ರಮ ನಡೆಯಲಿದೆ ಎಂದು ನಗರ್ತ ಮಹಿಳಾ ಸಂಘದ ಅಧ್ಯಕ್ಷೆ ಭಾರತಿ ಪ್ರಭುದೇವ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement