ಕಾರು-ಟ್ರಕ್ ಡಿಕ್ಕಿ; ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ
ನಾಗಮಂಗಲ: ಕಾರೊಂದು ಟ್ರಕ್ವೊಂದಕ್ಕೆ ಡಿಕ್ಕಿಯೊಡೆದ ಪರಿಣಾಮ, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದರೆ, ಮತ್ತಿಬ್ಬರು ತೀವ್ರ ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ 48 ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ. ಬೆಂಗಳೂರಿನ ಕೆಂಗೇರಿ ನಿವಾಸಿಗಳಾದ ವಿಜಯಕುಮಾರ್ ಹಾಗೂ ಮೋಹನ್ ಎಂಬುವವರೇ ಸಾವನ್ನಪ್ಪಿದ ದುರ್ದೈವಿಗಳು. ಗಾಯಗೊಂಡಿರುವ ವರುಣ್ ಮತ್ತು ನಂದನ್ ಎಂಬುವವರಿಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಬೆಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರೊಂದು ರಸ್ತೆಯ ಡಿವೈಡರ್ ಹತ್ತಿಸಿ ಎದುರಿನಿಂದ ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಾಗ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕಂಚಿನಕೋಟೆ ಸಮೀಪ ಈ ದುರ್ಘಟನೆ ಸಂಭವಿಸಿದೆ. ಅತಿ ವೇಗದಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಬಂಭವಿಸಿದೆ. ಕಾರಿನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು. ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಚುಂಚನಗಿರಿ ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಉಳಿದ್ದಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.