ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಮನುಷ್ಯನ ದಬ್ಬಾಳಿಕೆಯಿಂದ ಪರಿಸರ ನಾಶ

Rashmi Kasaragodu
Updated On : 8 Jun 2013, 12:25 pm

ವಿಜಯಪುರ: ಇಂದು ಪ್ರತಿಯೊಂದು ಅನ್ನದ ಅಗಳಿಗೂ ಬಹಳಷ್ಟು ಬೆಲೆ ಇದೆ. ಬಹಳ ಸಮಾರಂಭಗಳಲ್ಲಿ ವ್ಯರ್ಥವಾಗಿ ಆಹಾರ ಚೆಲ್ಲಲಾಗುತ್ತಿದೆ.ಇದು ಅಗಬಾರದು ಎಂದು ಪರಿಸರವಾದಿ, ನೀರು ಮತ್ತು ನೈರ್ಮಲ್ಯ ತಜ್ಞ ಕೆ.ಗುರುದೇವ್ ತಿಳಿಸಿದರು.
ಅವರು ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಗರ್ತ ಮಹಿಳಾ ಸಂಘ, ಸರ್ಕಾರಿ ಬಾಲಕಿಯರ ಪ್ರೌಢಶಾಲಾ ವಿಭಾಗದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಉಪನ್ಯಾಸ ನೀಡಿ ಮಾತನಾಡುತ್ತಿದ್ದರು.
ಬೆಳೆಯುತ್ತಿರುವ ಜನಸಂಖ್ಯೆಗೆ ಸಾಕಷ್ಟು ಆಹಾರ ಪೂರೈಸಲು ಬೆಳೆ ಬೆಳೆಯಲು ಭೂಮಿ ಇಲ್ಲ ಎನ್ನುವುದನ್ನು ಮನದಟ್ಟು ಮಾಡಿದರು.
ಇದೇ ಸಂದರ್ಭದಲ್ಲಿ ಶಿಕ್ಷಕಿ ಶೈಲಜಾ ಮಾತನಾಡಿ ಮನುಜ ಇಂದು ಆಧುನಿಕತೆಯ ನೆಪದಲ್ಲಿ ಪ್ರಕೃತಿಯ ಮೇಲೆ ನಿರಂತರ ದಬ್ಬಾಳಿಕೆ ಮಾಡುತ್ತಾ  ಸಾಕಷ್ಟು ಪರಿಸರ ಹಾಳು ಮಾಡುತ್ತಾ ಬರುತ್ತಿದ್ದಾನೆ.ಇದರಿಂದ ಭೂಮಿಯ ತಾಪಮಾನ ಬಹಳ ಹೆಚ್ಚಾಗಿರುವುದು ನಮಗೆಲ್ಲಾ ತಿಳಿದ ವಿಚಾರ ನಮ್ಮಲ್ಲಿ ನೀರಿನ ಸಮಸ್ಯೆ ಸಾಕಷ್ಟು ಎದುರಾಗಿದ್ದು ಚರಂಡಿನೀರನ್ನು ಶುದ್ಧೀಕರಿಸಿ ಮರುಬಳಕೆಗೆ ಉಪಯೋಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇದೇ ನೀರನ್ನು ಕುಡಿಯಬೇಕಾದ ಪರಿಸ್ಥಿತಿ ಎದುರಾಗಬಹುದು ಎಂದರು.  
ಉಪಪ್ರಾಂಶುಪಾಲ ಡಿ.ರಾಮಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಟ್ಟಣದ ಮುಖ್ಯ ಬೀದಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಸಲುವಾಗಿ ಮಕ್ಕಳು ಭಿತ್ತಿ ಪತ್ರಗಳನ್ನು ಹಿಡಿದು ಘೋಷಣೆಗಳೊಂದಿಗೆ ಮೆರವಣಿಗೆ ನಡೆಸಿದರು.
 ಸಿ.ಬಸಪ್ಪ,ಮಹಿಳಾ ಸಂಘದ ಅಧ್ಯಕ್ಷೆ ಭಾರತಿ ಪ್ರಭುದೇವ್, ಮಹಂತಿನ ಮಠದ ಅಧ್ಯಕ್ಷೆ
ಶೀಲಾ ಸುರೇಶ್, ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಿ.ಎನ್.ಕೃಷ್ಣಮೂರ್ತಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement