ಇಎಸ್‌ಐ ಆಸ್ಪತ್ರೆಗೆ ಇಂದು ಶಂಕುಸ್ಥಾಪನೆ
ದೊಡ್ಡಬಳ್ಳಾಪುರ: ಇಲ್ಲಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಅಪೆರಲ್ ಪಾರ್ಕ್‌ನ ಟ್ರಕ್ ಟರ್ಮಿನಲ್ ಪ್ಲಾಟ್‌ನಲ್ಲಿ ಕಾರ್ಮಿಕರ ರಾಜ್ಯ ವಿಮಾ ನಿಗಮ ಇಎಸ್‌ಐಸಿ ಆಸ್ಪತ್ರೆ ಶಂಕುಸ್ಥಾಪನಾ ಸಮಾರಂಭ ಜೂ.9ರಂದು ಮಧ್ಯಾಹ್ನ 3.30ಕ್ಕೆ ನಡೆಯಲಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಮಲ್ಲಿಕಾರ್ಜುನ ಖರ್ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕೇಂದ್ರ ಪೆಟ್ರೋಲಿಯಂ ಸಚಿವ ಡಾ.ಎಂ.ವೀರಪ್ಪ ಮೊಯ್ಲಿ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವ ಕೋಡಿಕುನ್ನಿಲ್ ಸುರೇಶ್, ರಾಜ್ಯ ಕಾರ್ಮಿಕ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ, ಕೃಷಿ ಸಚಿವ ಕೃಷ್ಣಬೈರೇಗೌಡ, ಶಾಸಕ ಟಿ.ವೆಂಕಟರಮಣಯ್ಯ, ವಿಧಾನಪರಿಷತ್ ಸದಸ್ಯ ಇ.ಕೃಷ್ಣಪ್ಪ, ಜಿಪಂ ಅಧ್ಯಕ್ಷ ವಿ.ನಾರಾಯಣಸ್ವಾಮಿ, ಉಪಾಧ್ಯಕ್ಷ ಎನ್.ಹನುಮಂತೇಗೌಡ, ತಾಪಂ ಅಧ್ಯಕ್ಷ ಡಿ.ನಾಗರಾಜ್, ಉಪಾಧ್ಯಕ್ಷ ಯಲ್ಲಪ್ಪ, ಬಾಶೆಟ್ಟಿಹಳ್ಳಿ ಗ್ರಾಪಂ ಅಧ್ಯಕ್ಷ ಗೋವಿಂದಪ್ಪ, ಉಪಾಧ್ಯಕ್ಷ ಕೃಷ್ಣವೇಣಿ ಭಾಗವಹಿಸಲಿದ್ದಾರೆ ಎಂದು ಕಾರ್ಮಿಕರ ರಾಜ್ಯ ವಿಮಾ ನಿಗಮದ ಮಹಾನಿರ್ದೇಶಕ ಎ.ಕೆ.ಅಗರವಾಲ್ ತಿಳಿಸಿದ್ದಾರೆ.
ಇಂದಿನಿಂದ ಕ್ರಿಕೆಟ್ ಟೂರ್ನಿ
ದೊಡ್ಡಬಳ್ಳಾಪುರ: ಇಲ್ಲಿನ ಶ್ರೀಗಾ ಯತ್ರಿ ಪೀಠ ಮಿತ್ರ ಬಳಗ ಟ್ರಸ್ಟ್, ಗಾಯತ್ರಿ ಪೀಠ ಯುವ ಬಳಗ, ಮಹಿಳಾ ಬಳಗದ ನೇತೃತ್ವದಲ್ಲಿ ನೇಕಾರ ಬಂಧುಗಳಿಗಾಗಿ 2ನೇ ವರ್ಷದ ಶ್ರೀದೇವರ ದಾಸಿಮಯ್ಯ ಕಪ್ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಜೂ.9 ಮತ್ತು 10ರಂದು ಕೊಂಗಾಡಿಯಪ್ಪ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಜೂ.9ರ ಭಾನುವಾರ ಬೆಳ್ಗಗೆ 6 ಗಂಟೆಗೆ ಪಂದ್ಯಾವಳಿಗಳು ಉದ್ಘಾಟನೆಗೊಳ್ಳಲಿವೆ. ಸುಮಾರು 30 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು, ಜೂ.10ರ ಸೋಮವಾರ ಸಂಜೆ ಫೈನಲ್ ಪಂದ್ಯ ನಡೆಯಲಿದೆ. ಪ್ರಥಮ ಬಹುಮಾನವಾಗಿ 3333 ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನವಾಗಿ 2222 ನಗದು ಮತ್ತು ಟ್ರೋಫಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
13ರಂದು ಕೃಷಿ ಸಮಾಜದ ಸಭೆ
ಮಾಗಡಿ: ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಜೂ.13ರಂದು ಬೆಳಗ್ಗೆ 11 ಗಂಟೆಗೆ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆಯನ್ನು ಕೃಷಿಕ ಸಮಾಜದ ಅಧ್ಯಕ್ಷ ಕೆ.ಎಚ್.ಕೃಷ್ಣಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಎಚ್.ಸಿ. ಕೃಷ್ಣಪ್ಪ ತಿಳಿಸಿದ್ದಾರೆ. 2013-14ನೇ ಸಾಲಿನ ಕೃಷಿ ಇಲಾಖೆಯ ಕಾರ್ಯಕ್ರಮಗಳು ಹಾಗೂ ಕೃಷಿಕ ಸಮಾಜದ ಕಟ್ಟಡ ನಿರ್ಮಾಣಕ್ಕೆ ನಿವೇಶನ ಕುರಿತು ಮತ್ತು ಇತರೆ ವಿಷಯಗಳ ಪ್ರಸ್ತಾಪನೆಗಾಗಿ ಸಮಿತಿಯ ಎಲ್ಲ ನಿರ್ದೇಶಕರು ಸಭೆಯಲ್ಲಿ ಭಾಗವಹಿಸಬೇಕೆಂದು ಕೋರಿದ್ದಾರೆ.