ಅಭಿವೃದ್ಧಿಗೆ ಆದ್ಯತೆ: ರಾಮಲಿಂಗಾರೆಡ್ಡಿ
ಆನೇಕಲ್: ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗುವ ತೀರ್ಮಾನಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ತಿಳಿಸಿದರು.
ತಾಲೂಕಿನ ಚಂದಾಪುರ ಸಮೀಪದ ಸೂರ್ಯಸಿಟಿಯಲ್ಲಿ ಕಾಂಗ್ರೆಸ್ ಪಕ್ಷದ ಪದವೀಧರ ವೇದಿಕೆ ವತಿಯಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ದಾನಿಗಳು ಮುಂದಾಗಬೇಕು. ಸರ್ಕಾದಿಂದ ಬರುವ ಸೌಲಭ್ಯಗಳನ್ನು ಬಳಸಿಕೊಂಡು ಉನ್ನತ ಶಿಕ್ಷಣ ಪಡೆಯುವಂತೆ ತಿಳಿಸಿದರು.
ಆನೇಕಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಬಿ.ಶಿವಣ್ಣ ಮಾತನಾಡಿ, ಸಮಾಜದಲ್ಲಿ ಶ್ರೀಮಂತರು ತಾವು ಸಂಪಾದನೆ ಮಾಡಿದ ಹಣದಲ್ಲಿ ಬಡವರಿಗೆ ಹಾಗೂ ಸಾಮಾಜಿಕ ಕಾರ್ಯಗಳಿಗೆ ತಮ್ಮ ಕೈಲಾದ ಮಟ್ಟಿಗೆ ಆರ್ಥಿಕ ಸಹಾಯವನ್ನು ಮಾಡಿದರೆ, ಬಡವಿದ್ಯಾರ್ಥಿಗಳಿಗೆ ಉಪಯುಕ್ತವಾಗುತ್ತದೆ ಎಂದು ಹೇಳಿದರು. ಕೇಂದ್ರ ಸರ್ಕಾರ ಸರ್ಕಾರಿ ಶಾಲೆಗಳ ಪ್ರಗತಿ ದೃಷ್ಟಿಯಿಂದ ಕಾರ್ಯಕ್ರಮಗಳನ್ನು ಕಾರ್ಯರೂಪಕ್ಕೆ ತಂದಿವೆ. ಗುಣಮಟ್ಟದ ಶಿಕ್ಷಣವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದರು. ಇದೇ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಆನೇಕಲ್ ಪದವೀಧರ ವೇದಿಕೆಯ ರಾಮಚೆಂದ್ರಾ ರೆಡ್ಡಿ, ಕೃಷ್ಣಾ ರೆಡ್ಡಿ, ನಾಗಿರೆಡ್ಡಿ ನೇತೃತ್ವದಲ್ಲಿ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಿಸಿದರು. ಸಾರಿಗೆ ಸಚಿವ ಆರ್.ರಾಮಲಿಂಗಾ ರೆಡ್ಡಿ ಹಾಗೂ ಆನೇಕಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಬಿ.ಶಿವಣ್ಣ ಅವರನ್ನು ಕಾಂಗ್ರೆಸ್ ಪಕ್ಷದ ಪದವೀಧರ ವೇದಿಕೆ ವತಿಯಂದ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಬಮೂಲ್ ನಿರ್ದೇಶಕ ಅರ್.ಕೆ. ರಮೇಶ್, ಜಿ.ಪಂ.ಸದಸ್ಯ ಪ್ರಭಾಕರ್ ರೆಡ್ಡಿ, ಚಂದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗವೇಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಣ್ಣ, ಚಂದ್ರಪ್ಪ,
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನೆರಳೂರು ವೆಂಕಟಸ್ವಾಮಿರೆಡ್ಡಿ, ಕೆಪಿಸಿಸಿ ಸದಸ್ಯ ಜಿಗಣಿ ಕೃಷ್ಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಂದರೆಡ್ಡಿ, ರಾಧಾ ಪ್ರಸಾದ್, ಮುಖಂಡರಾದ ಲೋಕೇಶ್, ಇಗ್ಗಲೂರು ಸಂಪತ್ ಮುಂತಾದವರು ಭಾಗವಹಿಸಿದ್ದರು.