ಕರವೇ ಅಧ್ಯಕ್ಷ ನಾರಾಯಣಗೌಡ ಜನ್ಮದಿನಾಚರಣೆ
ದೊಡ್ಡಬಳ್ಳಾಪುರ: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ಕರವೇ ತಾಲೂಕು ಘಟಕದ ನೇತೃತ್ವದಲ್ಲಿ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಾಲು, ಹಣ್ಳು-ಹಂಪಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾ ಮುಖಂಡ ಟಿ.ಜಿ. ಮಂಜುನಾಥ್, ಕನ್ನಡಪರವಾದ ಹಲವು ಹೋರಾಟಗಳಲ್ಲಿ ಸಕ್ರಿಯ ಪಾತ್ರ ವಹಿಸಿಕೊಂಡುವ ಬರುತ್ತಿರುವ ನಾರಾಯಣಗೌಡರು ಕನ್ನಡದ ಗಟ್ಟಿದನಿಯಾಗಿದ್ದಾರೆ. ಕನ್ನಡಿಗರ ಸ್ವಾಭಿಮಾನ, ನಾಡು-ನುಡಿ ಚಿಂತನೆಯಲ್ಲಿ ಹಲವು ಯುವಕರನ್ನು ಹುರಿದುಂಬಿಸುವ ಕೆಲಸಗಳಲ್ಲಿ ತೊಡಗಿರುವ ಅವರಿಗೆ ಶುಭವಾಗಲಿ ಎಂಬ ಹಾರೈಕೆಯೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.