ಪ್ರತಿಭಾ ಪುರಸ್ಕಾರ ಸಮಾರಂಭ
ಕನಕಪುರ: ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ ವತಿಯಿಂದ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಕನಕಪುರದಲ್ಲಿರುವ ಸಂಘದ ಕಾರ್ಯಾಲಯದಲ್ಲಿ ಕೆ.ವಿ.ಲಕ್ಷ್ಮಣರಾವ್ ಲೋಖಂಡೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ 2012-13ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳನ್ನು ಪಡೆದಿರುವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ದೇವುರಾವ್ ಜಾಧವ್ ಇತರರು ಪಾಲ್ಗೊಂಡಿದ್ದರು.