ವೈದ್ಯಾಧಿಕಾರಿಗಳ ವಿರುದ್ಧ ಸಚಿವರಿಗೆ ದೂರು
ಮಾಗಡಿ: ಜಿಲ್ಲಾ ವೈದ್ಯಾಧಿಕಾರಿಗಳ ವಿರುದ್ಧ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರಲ್ಲಿ ದೂರು ನೀಡಿರುವುದಾಗಿ ಡೆಂಘೀ ಜ್ವರದಿಂದ ಚೇತರಿಸಿಕೊಂಡಿರುವ ಬಿಸ್ಕೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಬಿ.ಎಸ್. ಸುಹೇಲ್ ದೂರು ನೀಡಿದ್ದಾಗಿ ತಿಳಿಸಿದ್ದಾರೆ.
ಬಿಸ್ಕೂರು ಗ್ರಾಮದಲ್ಲಿ ಈಗಾಗಲೇ ಡೆಂಘೀಗೆ ಮಹಿಳೆ ಮಂಗಳಮ್ಮ, ಪ್ರಕಾಶ್ ಪುತ್ರಿ ಸಹನಾ ಬಲಿಯಾಗಿದ್ದು, ಈ ಸಂಬಂಧ ಜಿಲ್ಲಾ ಆಡಳಿತ ವೈದ್ಯಾಧಿಕಾರಿಗಳು ಇಲ್ಲಿಯವರೆವಿಗೂ ಗ್ರಾಮಕ್ಕೆ ಭೇಟಿ ನೀಡಿಲ್ಲ, ಡೆಂಘಿ ಜ್ವರದ ನಿಯಂತ್ರಣಕೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡರೂ, ನನ್ನ ಮನವಿಗೆ ಕಿಮ್ಮತ್ತು ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ. ಇವರ ವಿರುದ್ಧ ಶಿಸ್ತಿನ ಕ್ರಮಕ್ಕೆ ಸಚಿವರಿಗೆ ಲಿಖಿತ ದೂರು ನೀಡಿದ್ದೇನೆ. ದೂರವಾಣಿ ಮೂಲಕ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿದ ಸಚಿವರು ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ನೀಡುವಂತೆ ಎಚ್ಚರಿಕೆ ನೀಡಿದರೂ ಭೇಟಿ ನೀಡಿಲ್ಲ ಎಂದು ಆರೋಪಿಸಿದರು.
ಡೆಂಘೀ ಜ್ವರದಿಂದ ಮೃತಪಟ್ಟವರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಡೆಂಘೀ ನಿಯಂತ್ರಣ ಅಗತ್ಯ ಕ್ರಮ ವಹಿಸುವಂತೆ ಸಚಿವರಲ್ಲಿ ಮನವಿ ಮಾಡಿದ್ದಾಗಿ ತಿಳಿಸಿದರು.