ಅಪರಿಚಿತ ವ್ಯಕ್ತಿ ಸಾವು
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್.ಎಸ್.ಘಾಟಿ ಸಮೀಪ ಸುಮಾರು 60 ವರ್ಷ ವಯಸ್ಸಿನ ಅಪರಿಚಿತ ಪುರುಷ ಸೂಕ್ತ ಆಹಾರ ಸೇವನೆ ಇಲ್ಲದೆ ನಿತ್ರಾಣಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಮೃತವ್ಯಕ್ತಿಗೆ ವಾರಸುದಾರರು ಯಾರಾದರೂ ಇದ್ದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಪೊಲೀಸರು ತಿಳಿಸಿದ್ದಾರೆ.
ಪೂರ್ವಭಾವಿ ಸಭೆ ಇಂದು
ದೊಡ್ಡಬಳ್ಳಾಪುರ: ತಾಲೂಕು ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭ ಕುರಿತು ಪೂರ್ವಭಾವಿ ಸಭೆ ಜೂ.15ರ ಮಧ್ಯಾಹ್ನ 3 ಗಂಟೆಗೆ ಇಲ್ಲಿನ ಬಸವೇಶ್ವರಸ್ವಾಮಿ ದೇವಾಲಯದಲ್ಲಿ ನಡೆಯಲಿದೆ. ತಾಲೂಕಿನ ಹಿರಿಯ ವೀರಶೈವ ಮುಖಂಡರು ಹಾಗೂ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಜೂ.23ರಂದು ಬಸವಭವನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಅಧ್ಯಕ್ಷ ಕೆ.ಮಹಾಲಿಂಗಯ್ಯ ತಿಳಿಸಿದ್ದಾರೆ.