ಇಂದು ವಿಶ್ವ ರಕ್ತದಾನಿಗಳ ದಿನಾಚರಣೆ
ದೊಡ್ಡಬಳ್ಳಾಪುರ: ಇಲ್ಲಿನ ಸಂಸ್ಕೃತಿ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ವಿಶ್ವರಕ್ತದಾನಿಗಳ ದಿನಾಚರಣೆ ಅಂಗವಾಗಿ ಜೂ.14ರ ಶುಕ್ರವಾರ ಕನ್ನಡ ಜಾಗೃತ ಭವನದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಶಿಬಿರ ನಡೆಯಲಿದ್ದು, ಆಸಕ್ತ ರಕ್ತದಾನಿಗಳು ಸ್ಪಯಂಪ್ರೇರಿತರಾಗಿ ರಕ್ತದಾನದಲ್ಲಿ ಭಾಗವಹಿಸುವಂತೆ ಪ್ರಕಟಣೆ ಕೋರಲಾಗಿದೆ. ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತನಿಧಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾಗೃತ ಪರಿಷತ್ತು, ದೊಡ್ಡಬಳ್ಳಾಪುರ ತಾಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಹಳ್ಳಿ ಜನಪದ-ಜನಸೇವಾ ಟ್ರಸ್ಟ್ ಮತ್ತಿತರ ಸಂಘಟನೆಗಳು ಸಹಕಾರ ನೀಡಿವೆ.