18 ರಂದು ಹಿತರಕ್ಷಣಾ ಸಮಿತಿ ಸಭೆ
ಮಾಗಡಿ: ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಹಿತರಕ್ಷಣಾ ಸಮಿತಿ ಸಭೆಯನ್ನು ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಜೂ.18 ರಂದು ಬೆಳಿಗ್ಗೆ 12 ಗಂಟೆಗೆ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಂಬಧಿಸಿದ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.
ರಾಮನಗರ: ಕೆಡಿಪಿ ಸಭೆ ಮುಂದೂಡಿಕೆ
ರಾಮನಗರ: ಜೂ.15 ರಂದು ನಡೆಯಬೇಕಿದ್ದ ಜಿಲ್ಲಾ ಪಂಚಾಯ್ತಿ ಪ್ರಗತಿ ಪರಿಶೀಲನಾ ಸಭೆಯನ್ನು ಕಾರಣಾಂತರಗಳಿಂದ ಜೂ.19ರ ಬೆಳಗ್ಗೆ 11ಕ್ಕೆ ಮುಂದೂಡಲಾಗಿದೆ ಜಿ.ಪಂ. ಸಿಇಒ ಡಾ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.