ಅಪಘಾತ: ವ್ಯಕ್ತಿ ದಾರುಣ ಸಾವು
ಹೊಸಕೋಟೆ: ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಜಿಇಎಫ್ ಕಣ್ಣಿನ ಆಸ್ಪತ್ರೆ ಮುಂಭಾಗ ಸಂಭವಿಸಿದ ಅಪಘಾತದಲ್ಲಿ ಕೂಲಿ ಕಾರ್ಮಿಕ ಮೃತಪಟ್ಟಿದ್ದಾನೆ. ಬೊಮ್ಮೇನಹಳ್ಳಿ ಮುನಿನಾರಾಯಣಪ್ಪ(50) ಮೃತ ವ್ಯಕ್ತಿ. ಈತ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದು, ಸ್ಕೂಟರ್‌ನಲ್ಲಿ ಮೊಮ್ಮಗ ಕಾರ್ತಿಕ್(16)ನೊಂದಿಗೆ ಗ್ರಾಮಕ್ಕೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಮುಂದೆ ಚಲಿಸುತ್ತಿದ್ದ ಕಾರಿನ ಚಾಲಕ ಹಠಾತ್ತನೆ ಬ್ರೇಕ್ ಹಾಕಿದ್ದು, ಮಾತ್ರವಲ್ಲದೇ ಹಿಂದಕ್ಕೆ ಚಾಲನೆ ಮಾಡಿ ಸ್ಕೂಟರ್‌ಗೆ ಡಿಕ್ಕಿಯೊಡೆದ ಪರಿಣಾಮ, ಮುನಿನಾರಾಯಣಪ್ಪ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಗಾಯಗೊಂಡ ಕಾರ್ತಿಕ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಾಡು,ನುಡಿ
ಚಿಂತನ-ಮಂಥನ
ರಾಮನಗರ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕನ್ನಡ ಕ್ರಿಯಾ ಸಮಿತಿಯಿಂದ ಜೂ.16ರ ಬೆಳಗ್ಗೆ 10ಕ್ಕೆ ಜಾನಪದ ಲೋಕದಲ್ಲಿ ನಾಡು-ನುಡಿ ರಕ್ಷಣೆ ಕುರಿತು ಚಿಂತನ-ಮಂಥನ ಶಿಬಿರ ನಡೆಯಲಿದೆ. ಜಾನಪದ ಲೋಕ ಕ್ಯುರೇಟರ್ ಕುರುವ ಬಸವರಾಜು ಶಿಬಿರ ಉದ್ಘಾಟಿಸುವರು. ವ.ಚ.ಚನ್ನೇಗೌಡ ಅಧ್ಯಕ್ಷತೆ ವಹಿಸುವರು.
ಪ್ರಥಮ ಸ್ಥಾನ
ಹೊಸಕೋಟೆ: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಇಂಡಸ್ಟ್ರಿಯಲ್ ಅಸೋಸಿಯೇಷನ್ ಭಾನುವಾರ ಎಲೆಕ್ಟ್ರಾನಿಕ್ ಸಿಟಿ ಆವರಣದಲ್ಲಿ ಆಯೋಜಿಸಿದ್ದ ಮುಕ್ತ 108 ಮೀ ಓಟದ ಸ್ಪರ್ಧೆಯಲ್ಲಿ ಕೆ.ಮಂಜುನಾಥ ಪ್ರಥಮ ಸ್ಥಾನ ಪಡೆದಿದ್ದಾರೆ.
ಮತದಾರರಿಗೆ ಅಭಿನಂದನೆ
ನೆಲಮಂಗಲ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿ.ಚನ್ನಿಗಪ್ಪಗೆ 34,500 ಮತ ನೀಡಿದ ಜನತೆಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ತ್ಯಾಮಗೊಂಡ್ಲು ಜಿಲ್ಲಾ ಪಂಚಾಯ್ತಿ ಸದಸ್ಯ ಡಿ.ಸಿ.ವೇಣುಗೋಪಾಲ್ ಅಭಿನಂದನೆ ಸಲ್ಲಿಸಿದ್ದಾರೆ.
ತಾಲೂಕಿನ ಭೈರನಾಯಕನಹಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇಣುಗೋಪಾಲ್, ವಿರೋಧ ಪಕ್ಷಗಳ ಅಪಪ್ರಚಾರದಿಂದ ಅಲ್ಪಮತಗಳಿಂದ ಜೆಡಿಎಸ್ ಅಭ್ಯರ್ಥಿ ಸಿ.ಚನ್ನಿಗಪ್ಪ ಪರಾಭವಗೊಂಡರೂ, ಕ್ಷೇತ್ರದ ಜನತೆಯ ಕಷ್ಟ ಸುಖಗಳಿಗೆ ಸ್ಪಂದಿಸುವ ಕಾರ್ಯ ಮುಂದುವರೆಸುತ್ತಾರೆ. ಜೆಡಿಎಸ್‌ನ್ನು ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಸಂಘಟಿಸಿ ಮುಂಬರುವ ಲೋಕಸಭಾ ಚುನಾವಣೆಗೆ ಸಜ್ಜುಗೊಳಿಸಿ ಕಾರ್ಯಕರ್ತರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದಾಗಿ ಅವರು ತಿಳಿಸಿದ್ದಾರೆ.