ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಪತ್ನಿ ಕೊಲೆ; ಪತಿ, ಮತ್ತಿತರರ ಸೆರೆ

Rashmi Kasaragodu
Updated On : 15 Jun 2013, 12:07 pm

ನೆಲಮಂಗಲ: ವರದಕ್ಷಿಣೆ ಹಾಗೂ ಮಾನಸಿಕ ಕಿರುಕುಳ ನೀಡಿ ಪತಿಯೇ ಪತ್ನಿ ಕೊಲೆ ಮಾಡಿರುವ ಘಟನೆ ಪಟ್ಟಣದ ಚನ್ನಪ್ಪ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ. ಜಮೀಲಾ(22) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ನಾಲ್ಕು ವರ್ಷಗಳ ಹಿಂದಷ್ಟೆ ಜಮೀಲಾ ವಿವಾಹವಾಗಿದ್ದರು. ಈಕೆಯ ಪತಿ ಅಜಗರ್ ಷರೀಫ್ ಆಕೆಯನ್ನು ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಮೃತಳ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪಟ್ಟಣ ಠಾಣೆ ಸಬ್‌ಇನ್ಸ್‌ಪೆಕ್ಟರ್ ನಾರಾಯಣಸ್ವಾಮಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಾದ ಆಕೆಯ ಪತಿ ಅಜಗರ್ ಷರೀಪ್, ಅತ್ತೆ, ಮಾವ, ಮೈದುನ ಹಾಗೂ ನಾದಿನಿಯನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement