ಪಿಜಿ ವೈದ್ಯಕೀಯ ಡಿಪ್ಲೋಮಾ ಫಲಿತಾಂಶ
ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ವೈದ್ಯಕೀಯ ಡಿಪ್ಲೋಮಾ ಕೋರ್ಸ್ ಫಲಿತಾಂಶ ಶನಿವಾರ ಪ್ರಕಟವಾಗಿದೆ. ಕಳೆದ ಮೇ ತಿಂಗಳಲ್ಲಿ ಪರೀಕ್ಷೆ ನಡೆದಿತ್ತು. ವಿವಿಯ ವೆಬ್ತಾಣ ಢಿಢಿಢಿ.ಝಠ್ಜ್ಡಡ.ಛ್ಛ.್ಝಟಿದಲ್ಲಿ ಫಲಿತಾಂಶ ಲಭ್ಯವಿದೆ.
ನೆಟ್ ಪರೀಕ್ಷೆ ವಿವರಕ್ಕೆ ಸಂಪರ್ಕಿಸಿ
ಬೆಂಗಳೂರು: ಪ್ರಸಕ್ತ ಸಾಲಿನ ಜೆಆರ್ಎಫ್ ನೆಟ್ ಪರೀಕ್ಷೆ ಜೂ.30ರಂದು ನಡೆಯಲಿದೆ. ಪರೀಕ್ಷಾ ಕೇಂದ್ರ , ಇತರ ವಿವರಗಳಿಗೆ ಢಿಢಿಢಿ.ಛಡಿಡ್ಠ್ಝಿಡಡಿಝ್ಛ.್ಛ್ಟಟ/ಛ್ಡಿ, 080-22961041ಸಂಪರ್ಕಿಸಿ.
'ಮನೆ ಕೆಲಸಗಾರರಿಗೆ ಸ್ಮಾರ್ಟ್ ಕಾರ್ಡ್ ಕೊಡಿ'
ಬೆಂಗಳೂರು: ಮನೆ ಕೆಲಸಗಾರರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಆಗ್ರಹಿಸಿ ಬೆಂಗಳೂರು ಜಿಲ್ಲಾ ಮನೆಕೆಲಸಗಾರರ ಸಂಘದ ಸದಸ್ಯರು ಶನಿವಾರ ಬನ್ನೇರುಘಟ್ಟ ರಸ್ತೆಯ ಕಾರ್ಮಿಕ ಆಯುಕ್ತರ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಮನೆ ಕೆಲಸ ಮಾಡುತ್ತಿರುವ ಕಾರ್ಮಿಕರು ವಿವಿಧ ರೀತಿಯ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರದ ಸೂಚನೆಯಂತೆ ಪ್ರತಿಯೊಬ್ಬ ಮನೆಕೆಲಸಗಾರನಿಗೆ ಸ್ಮಾರ್ಟ್ ಕಾರ್ಡ್ ನೀಡಬೇಕು ಎಂದು ಒತ್ತಾಯಿಸಿದರು. ಕಾರ್ಮಿಕ ಇಲಾಖೆಯ ಜಂಟಿ ಆಯುಕ್ತ ನರಸಿಂಹಮೂರ್ತಿ ಅವರು ಪ್ರತಿಭಟನಾಕಾರರು ನೀಡಿದ ಮನವಿ ಸ್ವೀಕರಿಸಿದರು. ನಂತರ ಮಾತನಾಡಿದ ಅವರು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದೇ ವೇಳೆ ಸಂಘದ ಮುಖಂಡ ಎಚ್.ಜಿ.ಶ್ರೀನಿವಾಸಮೂರ್ತಿ ಮಾತನಾಡಿ, ಮನೆ ಕೆಲಸ ಮಾಡುತ್ತಿರುವ ಮಹಿಳೆ, ಪುರುಷರಿಗೆ ಸಿಗುವ ಸಂಬಳ ಸಾಲುತ್ತಿಲ್ಲ. ಇದರಿಂದ ಅವರ ಕುಟುಂಬಗಳು ಸಂಕಷ್ಟದಲ್ಲಿ ಸಿಲುಕಿವೆ. ಹಾಗಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.