ವೇದಿಕೆ ಹಂಚಿಕೊಂಡ ಡಿಕೆಶಿ
ರಾಮನಗರ: ಸಚಿವ ಸ್ಥಾನ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಅಧಿವೇಶನ ಮುಗಿಯುವ ತನಕ ಶಾಸಕರಾಗಿ ಪ್ರಮಾಣ ವಚನವನ್ನೂ ಸ್ವೀಕರಿಸದಿದ್ದ ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಸೋಮವಾರ ಮೊದಲ ಬಾರಿ ಪಕ್ಷದ ವೇದಿಕೆ ಹಂಚಿಕೊಂಡಿದ್ದಾರೆ. ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭೇಟಿ ಹಿನ್ನೆಲೆಯಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶಿವಕುಮಾರ್ ಪಾಲ್ಗೊಂಡಿದ್ದರು.