ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಬಗರ್ ಹುಕುಂ ಸಾಗುವಳಿದಾರರ ಸಮಾವೇಶ

Rashmi Kasaragodu
Updated On : 19 Jun 2013, 12:32 pm

ಕ.ಪ್ರ.ವಾರ್ತೆ ಟಿ ಕನಕಪುರ ಟಿ ಜೂ.18
ಕನಕಪುರದ ಕರ್ನಾಟಕ ರಾಜ್ಯ ಪ್ರಾಂತ್ಯ ರೈತಸಂಘದ ವತಿಯಿಂದ ಬಗರ್ ಹುಕುಂ ಸಾಗುವಳಿದಾರರ ದ್ವಿತೀಯ ಸಮಾವೇಶ ಇಲ್ಲಿನ ರೋಟರಿ ಭವನದಲ್ಲಿ ನಡೆಯಿತು. ನೂರಾರು ಮಂದಿ ರೈತರು ರೇಷ್ಮೆಗೂಡಿನ ಮಾರುಕಟ್ಟೆಯಿಂದ ಮೆರವಣಿಗೆಯಲ್ಲಿ ಬಂದು ಸಮಾವೇಶದಲ್ಲಿ ಪಾಲ್ಗೊಂಡರು.
ರಾಜ್ಯ ಉಪಾಧ್ಯಕ್ಷ ವೆಂಕಟರಾಮಯ್ಯ ಸಮಾವೇಶದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಾ, ಬಗರ್‌ಹುಕುಂ ಜಮೀನನ್ನು ಸಕ್ರಮಗೊಳಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಸರ್ಕಾರದ ನಿರ್ಲಕ್ಷ್ಯದಿಂದ ರೈತರು ಕಂಗೆಟ್ಟಿದ್ದಾರೆ. ಹಲವಾರು ದಶಕಗಳಿಂದ ಜಮೀನು ಸಕ್ರಮಗೊಳ್ಳುತ್ತದೆ ಎಂದು ಜಾತಕಪಕ್ಷಿಗಳಂತೆ ಕಾಯುತ್ತಿದ್ದಾರೆ ಎಂದು ಹೇಳಿದರು. ಕನಕಪುರ ತಾಲೂಕಿನ ಅರಣ್ಯಭೂಮಿ ಹಾಗೂ ಕಂದಾಯ ಭೂಮಿಗಳಲ್ಲಿ ನಾಲ್ಕೈದು ದಶಕಗಳಿಂದ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆ ಅನಗತ್ಯ ಕಿರುಕುಳ ನೀಡುತ್ತಿದೆ. ರೈತರನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದೆ. ಕಂದಾಯ ಇಲಾಖೆ ರೈತರಿಗೆ ಸಾಗುವಳಿ ಚೀಟಿ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ವೆಂಕಟರಾಮಯ್ಯ ಟೀಕಿಸಿದರು.
ಸಮಾವೇಶದಲ್ಲಿ ರೈತರ ಭೂಮಿ ಸಕ್ರಮಗೊಳಿಸಬೇಕು, ತಕ್ಷಣವೇ ಸಾಗುವಳಿ ಚೀಟಿ ನೀಡಬೇಕು, 2006ರ ಅರಣ್ಯಹಕ್ಕು ಕಾಯಿದೆ ಜಾರಿಗೊಳಿಸಬೇಕು, ಒಕ್ಕಲೆಬ್ಬಿಸುವ ಕಾರ್ಯವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಲಾಯಿತು. ಸಭೆಯಲ್ಲಿ ರೈತ ಮುಖಂಡರುಗಳಾದ ಶ್ರೀನಿವಾಸ್, ರಾಮಸ್ವಾಮಿ, ಮಹೇಂದ್ರ, ಕೃಷ್ಣಾನಾಯಕ್, ಸೋಮಶೇಖರ್‌ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement