ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಸ್ವಸಹಾಯ ಸಂಘದ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ: ಶಾಸಕ

Mainashree
Updated On : 20 Jun 2013, 12:02 pm

ನೆಲಮಂಗಲ: ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಅರ್ಹ ವ್ಯಕ್ತಿಗಳಿಗೆ ದೊರಕುವಂತೆ ಮಾಡುವ ಭರವಸೆ ನೀಡಿ, ಸ್ವ ಸಹಾಯ ಸಂಘದ ಮಹಿಳೆಯರಿಗೆ ಮುಂದಿನ ದಿನಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ  ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಹೇಳಿದರು.
ಅವರು ಬುಧವಾರ ತಾಲೂಕಿನ ಸಂದೀಪ್ ಸೇವಾ ನಿಲಯಂ ಸಂಸ್ಥೆಯ ಆವರಣದಲ್ಲಿ ಸಂಸ್ಥೆಯ ಪರವಾಗಿ ಹಾಗೂ ಸ್ನೇಹಭಾರತಿ ಮಹಿಳಾ ಅಭಿವೃದ್ಧಿ ಗುಂಪಿನ ಒಕ್ಕೂಟ ಸಭೆಯ ವತಿಯಿಂದ  ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ  ಸ್ವಸಹಾಯ ಸಂಘದ ಮಹಿಳೆಯರು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಸಂಘ ಸಂಸ್ಥೆಗಳು ನಡೆಸುವ ಜಾಗೃತಿ ಕಾರ್ಯಕ್ರಮಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಅತಿ ಮುಖ್ಯ ಎಂದರು.  ಪುರಸಭಾ ಮಾಜಿ ಉಪಾಧ್ಯಕ್ಷ ಹೇಮಂತ್‌ಕುಮಾರ್ ಮಾತನಾಡಿ,  ಸಂಸ್ಥೆಯ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೆ ತರಲು ಸ್ವಯಂ ಸೇವಾ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತವೆ ಹಾಗೂ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚು ಒತ್ತು ನೀಡುವ ವಿಷಯದಲ್ಲಿ ಎಲ್ಲಾ ಮಹಿಳೆಯರು ಗಮನ ವಹಿಸಬೇಕು. ಉತ್ತಮ ಸಮಾಜದ ಸೃಷ್ಟಿಗೆ ಮುಂದಾಗಬೇಕು ಎಂದು ತಿಳಿಸಿದರು. ಸಂಸ್ಥೆಯ ವತಿಯಿಂದ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.  ಪುರಸಭಾ ಸದಸ್ಯ ಪ್ರಸನ್ನಕುಮಾರ್, ಸಿಸ್ಟರ್ ಪುಷ್ಪಲತಾ, ಲವೀನ,  ನಿರ್ದೇಶಕ ಕಸೋಡ್, ಸಂಸ್ಥೆಯ ಕಾರ್ಯದರ್ಶಿಗಳಾದ ಲಿಲ್ಲಿ ಸಾಮ್ಯುಯಲ್, ವ್ಯವಸ್ಥಾಪಕ ಸಾಮ್ಯುಯಲ್ ಪ್ರಭಾಕರನ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement