ರೇವಣ್ಣಸಿದ್ದಯ್ಯ ಅಧ್ಯಕ್ಷರಾಗಿ ಆಯ್ಕೆ
ನೆಲಮಂಗಲ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ರೇವಣ್ಣಸಿದ್ದಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಬಿ.ಹೊಂಬಯ್ಯ ಅವರ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ನೂತನ ಅಧ್ಯಕ್ಷರ ಆಯ್ಕೆ ಮಾಡಲಾಯಿತು. ತಾಲೂಕು ನೌಕರರ ಸಂಘದ ಗೌರವಾಧ್ಯಕ್ಷ ಕೆ.ಜಿ. ಭೀಮರಾಜು, ಸಂಘದ ಕಾರ್ಯದರ್ಶಿ ಎಲ್.ಮೋಹನ್ಕುಮಾರ್, ಕೋಶಾಧ್ಯಕ್ಷ ಎಸ್. ಬಿರಾದರ್, ಗಿರೀಶ್, ಪುಟ್ಟರುದ್ರಾರಾಧ್ಯ, ವಾಸುದೇವಮೂರ್ತಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ವಿ.ಕುಮಾರ್, ಕಾರ್ಯದರ್ಶಿ ಎಸ್.ಬಸಣ್ಣ, ಬಿ.ಜಿ.ರಮೇಶ್ ಇದ್ದರು.