ಕೆಂಪೇಗೌಡನದೊಡ್ಡಿ: ಮರಿದೇವರು ಹುಟ್ಟುಹಬ್ಬ
48 ಕೆಜಿ ತೂಕದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಗ್ರಾಮಸ್ಥರು, ವಿದ್ಯಾರ್ಥಿಗಳು
ಕ.ಪ್ರ.ವಾರ್ತೆ ರಾಮನಗರ ಜೂ.26
ವಿಧಾನಸಭೆ ಚುನಾವಣೆ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಮರಿದೇವರು ಅವರ 48ನೇ ಹುಟ್ಟುಹಬ್ಬ ಆಚರಣೆ ಸಮಾರಂಭವು ಸ್ವಗ್ರಾಮವಾದ ಕೆಂಪೇಗೌಡನದೊಡ್ಡಿಯಲ್ಲಿ ಗ್ರಾಮಸ್ಥರು ಮತ್ತು ಸ್ಥಳೀಯ ಸರ್ಕಾರಿ ಶಾಲಾ ಮಕ್ಕಳ ಸಮ್ಮುಖದಲ್ಲಿ ನಡೆಯಿತು.
ಗ್ರಾಮಸ್ಥರು ಮತ್ತು ಶಾಲಾ ಮಕ್ಕಳೊಂದಿಗೆ 48 ಕೆಜಿ ತೂಕದ ಕೇಕ್ ಕತ್ತರಿಸುವ ಮೂಲಕ ಮರಿದೇವರು ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಇದೇ ವೇಳೆ ಶಾಲಾ ಮಕ್ಕಳಿಗೆ ನೋಟಟ್ಪುಸ್ತಕ, ಲೇಖನ ಸಾಮಗ್ರಿಯೊಂದಿಗೆ ಸಿಹಿ ವಿವರಿಸಲಾಯಿತು.
ಬಳಿಕ ನಗರದ ಹೊರ ವಲಯದ ಶ್ರೀಬಾಲಗಂಗಾಧರನಾಥ ಸ್ವಾಮೀಜಿ ಅಂಧರ ಶಾಲೆಯ ಮಕ್ಕಳಿಗೆ ಭೋಜನ ವ್ಯವಸ್ಥೆ ಕಲ್ಪಿಸಿದ ಮರಿದೇವರು ಅಂಧ ಮಕ್ಕಳೊಂದಿಗೆ ಸಾಮೂಹಿಕ ಭೋಜನದಲ್ಲಿ ಪಾಲ್ಗೊಂಡರು.
ಬೆಂಬಲಿಗರು ಆಯೋಜಿಸಿದ್ದ ಕಾರ್ಯಕ್ರಮದಲ್ಲೂ ಅವರು ಕೇಕ್ ಕತ್ತರಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಂತರಾಜ್ ಪಟೇಲ್, ಆರ್.ಕೆ.ಬೈರಲಿಂಗಯ್ಯ, ಚೇತನ್, ಚಂದ್ರೇಗೌಡ, ಶಿವಲಿಂಗಯ್ಯ, ಸಲೀಂ ಪಾಷ, ಉಮೇಶ್, ಚಂದ್ರು, ವೆಂಕಟೇಶ್ ಮತ್ತಿತರರು ಶುಭ ಕೋರಿದರು.
ಮಕ್ಕಳಿಗೆ ಲೇಖನ ಸಾಮಗ್ರಿ ವಿತರಣೆ
ಕನಕಪುರ: ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಉತ್ತಮ, ಗುಣಾತ್ಮಕ ಶಿಕ್ಷಣ ನುರಿತ ಅಧ್ಯಾಪಕರಿಂದ ದೊರೆಯುತ್ತಿದೆ. ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ತೊರೆದು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲು ಮಾಡಬೇಕು ಎಂದು ಶಿಕ್ಷಣಾಧಿಕಾರಿ ಶಿವರಾಮೇಗೌಡ ಹೇಳಿದರು.
ಇಲ್ಲಿನ ಅಂಬೇಡ್ಕರ್ ನಗರದ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬಟ್ಟೆ, ಪುಸ್ತಕ ಹಾಗೂ ಲೇಖನ ಸಾಮಗ್ರಿಗಳ ವಿತರಣೆ ನೆರವೇರಿಸಿ ಮಾತನಾಡಿದ ಅವರು, ಪುರಸಭಾ ಮಾಜಿ ಉಪಾಧ್ಯಕ್ಷೆ ನಿರ್ಮಲಾ ಗುಂಡಣ್ಣ ಅಧ್ಯಕ್ಷತೆ ವಹಿಸಿದ್ದರು.
ಸರ್ಕಾರ ಮಕ್ಕಳಿಗೆ ಶುಲ್ಕ ರಹಿತ ಉಚಿತ ಶಿಕ್ಷಣ ನೀಡುತ್ತಿದೆ. ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ, ಪ್ರೌಢಶಾಲೆ ಮಕ್ಕಳಿಗೆ ಸೈಕಲ್, ವಿದ್ಯಾರ್ಥಿ ವೇತನ, ವಸತಿ ನಿಲಯ ಸೌಲಭ್ಯ ನೀಡಿದೆ. ಸರ್ಕಾರಿ ಶಾಲೆಯ ಶಿಕ್ಷಕರು ಶೈಕ್ಷಣಿಕ ತಜ್ಞರ ತರಬೇತಿ ಹೊಂದಿದೆ. ಉತ್ತಮ ಶಿಕ್ಷಣ ಒದಗಿಸುತ್ತಿದ್ದಾರೆ. ಪೋಷಕರು ಈ ಎಲ್ಲಾ ಸವಲತ್ತುಗಳನ್ನು ಬಳಸಿಕೊಳ್ಳಲು ಮುಂದಾಗಬೇಕು ಎಂದು ಶಿವರಾಮೇಗೌಡ ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಸಂಪನ್ಮೂಲಾಧಿಕಾರಿ ಚಂದ್ರಶೇಖರ್, ಮುಖ್ಯಶಿಕ್ಷಕಿ ನೇತ್ರಾವತಿ ಪಾಲ್ಗೊಂಡಿದ್ದರು.