ಕಾಮಗಾರಿಗಳಿಗೆ ಚಾಲನೆ
ಹೊಸಕೋಟೆ: ತಾಲೂಕಿನ ಹಸಿಗಾಳ ಗ್ರಾಮದಲ್ಲಿ ಸರ್ವ ಶಿಕ್ಷಣ ಅಭಿಯಾನದಡಿಯಲ್ಲಿ ಮಂಜೂರಾಗಿರುವ ವಿವಿಧ ಕಾಮಗಾರಿಗಳಿಗೆ ಸಚಿವ ಬಚ್ಚೇಗೌಡ ಚಾಲನೆ ನೀಡಿದರು. ನಂತರ ಮಾತನಾಡಿ ಪಶು ಆಸ್ಪತ್ರೆ ಕಟ್ಟಡಕ್ಕೆ 16 ಲಕ್ಷ, ಅಂಗನವಾಡಿ ಕಟ್ಟಡಕ್ಕೆ 4 ಲಕ್ಷ, ದಾಸೋಹ ಕೊಠಡಿಗಳಿಗೆ 24 ಲಕ್ಷ ಮಂಜೂರಾಗಿರುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ನೂತನ ಶಾಲಾ ಕಟ್ಟಡವನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಎಮ್.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯ್ತಿ ಸದಸ್ಯೆ ವೆಂಕಟಲಕ್ಷ್ಮಮ್ಮ, ತಾಲೂಕು ಪಂಚಾಯ್ತಿ ಸದಸ್ಯ ಬಿ.ವಿ.ರಾಜಶೇಕರ್ ಗೌಡ, ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ.ಸತೀಶ್ಗೌಡ, ಶಾಲಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಪಿಳ್ಳೇಗೌಡ ಮುಂತಾದ ಗಣ್ಯರು ಹಾಜರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.