ಬಿರುಸುಗೊಂಡ ಚುನಾವಣಾ ಕಾವು
ಮಾಗಡಿ: ಮಾಜಿ ಸಚಿವ ಎಚ್.ಎಂ.ರೇವಣ್ಣ ಸಾರಥ್ಯದಲ್ಲಿ ಕೆಪಿಸಿಸಿ ಸದಸ್ಯ ಎ.ಮಂಜು ಮತ್ತು ಡಾ.ಎಚ್.ಎಂ.ಕೃಷ್ಣಮೂರ್ತಿ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಚುನಾವಣೆ ಪ್ರಚಾರ ಆರಂಭಿಸಿದರೆ, ಗುರುವಾರ ಜೆಡಿಎಸ್ ಶಾಸಕ ಎಚ್.ಸಿ. ಬಾಲಕೃಷ್ಣ, 23 ವಾರ್ಡ್ಗಳ ಅಭ್ಯರ್ಥಿಗಳೊಂದಿಗೆ ಕಲ್ಯಗೇಟ್ ಶ್ರೀವಿನಾಯಕ ಹಾಗೂ ತಿರುಮಲೆ ಶ್ರೀರಂಗನಾಥಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಸ್ಥಳೀಯ ಸಂಸ್ಥೆಗಳ ಪ್ರಚಾರ ಆರಂಭಿಸಿದ್ದಾರೆ.
ಮಾಗಡಿ ಪುರಸಭೆ 23 ವಾರ್ಡ್ಗಳನ್ನು ಒಳಗೊಂಡಿದ್ದು, ಆಡಳಿತ ರೂಢ ಬಿಜೆಪಿ ಕೇವಲ 12 ಅಭ್ಯರ್ಥಿಗಳನ್ನು ಮಾತ್ರ ಕಣಕ್ಕಿಳಿಸಿದೆ. ಬಿಎಸ್ಆರ್ನಿಂದ 8, ಕೆಜೆಪಿಯಿಂದ 7, ಸ್ವತಂತ್ರವಾಗಿ 8 ಅಭ್ಯರ್ಥಿಗಳು ಕಣದಲ್ಲಿದ್ದರೂ ಆರ್ಥಿಕತೆಯ ಕೊರತೆಯಿಂದ ತೆರೆಮರೆಯಲ್ಲಿ ಮತದಾರರ ಮನವೊಲಿಸುವತ್ತ ಪ್ರಯತ್ನ ನಡೆದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.