ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕಾಗಿ ತಂಡ ರಚನೆ

Parashurama
Updated On : 2 Mar 2013, 12:22 pm

ರಾಮನಗರ: ಪೌರ ಸಂಸ್ಥೆಗಳ ಚುನಾವಣೆಯನ್ನು ನ್ಯಾಯ ಸಮ್ಮತ ಮತ್ತು ಮುಕ್ತವಾಗಿ ನಡೆಸುವ ನಿಟ್ಟಿನಲ್ಲಿ ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕಾಗಿ ಜಿಲ್ಲಾಡಳಿತವು ಅಧಿಕಾರಿ, ಸಿಬ್ಬಂದಿ ತಂಡವನ್ನು ರಚಿಸಿದೆ.  
ರಾಮನಗರ ನಗರಸಭೆ ವ್ಯಾಪ್ತಿಗೆ ಭೂಮಾಪನ ಇಲಾಖೆಯ ಉಪ ನಿರ್ದೇಶಕ ಮರಿಸ್ವಾಮಿಗೌಡ ನೇತೃತ್ವದ ತಂಡದಲ್ಲಿ  ನಗರಸಭೆ ಪೌರಾಯುಕ್ತ, ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕ, ಅಬಕಾರಿ ಇಲಾಖೆಯ ಹಿರಿಯ ನಿರೀಕ್ಷಕರಿದ್ದಾರೆ.  
ಚನ್ನಪಟ್ಟಣ ನಗರಸಭೆ ವ್ಯಾಪ್ತಿ ಪರಿಶೀಲನಾ ತಂಡದ ಮುಖ್ಯಸ್ಥರಾಗಿ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ತಿಮ್ಮಪ್ಪ ನೇಮಕಗೊಂಡಿದ್ದಾರೆ. ಚನ್ನಪಟ್ಟಣ ನಗರಸಭೆ ಪೌರಾಯುಕ್ತ, ಚನ್ನಪಟ್ಟಣ ಪೊಲೀಸ್‌ಪುರ ಠಾಣೆ ಆರಕ್ಷಕ ಉಪ ನಿರೀಕ್ಷಕ,  ಚನ್ನಪಟ್ಟಣ ಅಬಕಾರಿ ಹಿರಿಯ ನಿರೀಕ್ಷಕ ತಂಡದಲ್ಲಿದ್ದಾರೆ.
ಕನಕಪುರ ಪುರಸಭೆಯ ಪರಿಶೀಲನಾ ತಂಡದ ಮುಖ್ಯಸ್ಥರಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿ ಎಸ್.ನಾಗರಾಜು, ಸದಸ್ಯರಾಗಿ ಪುರಸಭೆ ಮುಖ್ಯಾಧಿಕಾರಿ, ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆ ಆರಕ್ಷಕ ಉಪನಿರೀಕ್ಷಕ, ಕನಕಪುರ ಅಬಕಾರಿ ನಿರೀಕ್ಷಕ ಇದ್ದಾರೆ.
ಮಾಗಡಿ ಪುರಸಭೆ ತಂಡದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕ ತಿಮ್ಮಪ್ಪ ಮುಖ್ಯಸ್ಥರಾಗಿದ್ದಾರೆ.  ಪುರಸಭೆ ಮುಖ್ಯಾಧಿಕಾರಿ, ಮಾಗಡಿ ಪೊಲೀಸ್ ಉಪ ನಿರೀಕ್ಷಕ, ಮಾಗಡಿ ಟೌನ್ ಅಬಕಾರಿ ನಿರೀಕ್ಷಕರು ತಂಡದಲ್ಲಿದ್ದಾರೆ.
ರೂಟ್ ಆಫೀಸರ್‌ಗಳು: ರೂಟ್ ಆಫೀಸರ್‌ಗಳಾಗಿ ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ನಿಯೋಜಿಸಲಾಗಿದೆ. ನಗರಸಭೆ ಮತ್ತು ಪುರಸಭೆಗಳ ಕಂದಾಯ ಅಧಿಕಾರಿಗಳು ಸಹಾಯಕರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಡಿಸಿ ನೇತೃತ್ವದ ಸಭೆ: ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶ್ರೀರಾಮರೆಡ್ಡಿ ಅವರು ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳ ಸಭೆ ನಡೆಸಿದ್ದು, ಯಾವುದೇ ಕಾರಣಕ್ಕೂ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದಾರೆ.   
ಚುನಾವಣೆಯನ್ನು ಶಾಂತಯುತವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ರಾಜ್ಯ ಚುನಾವಣಾ ಆಯೋಗವು ಶಿವಕುಮಾರ್ ಮತ್ತು ಹೀರಾ ನಾಯಕ್ ಅವರನ್ನು ಈ ಜಿಲ್ಲೆಗೆ ವೀಕ್ಷಕರನ್ನಾಗಿ ನೇಮಿಸಿದೆ. ಅವರಿಗೆ ಸ್ಥಳೀಯ ಅಧಿಕಾರಿಗಳು ಸೂಕ್ತ ಸಹಕಾರ ನೀಡಬೇಕು ಎಂದರು.
ಚುನಾವಣಾಧಿಕಾರಿಗಳು ರಾಜಕೀಯ ಪಕ್ಷಗಳ ಸಭೆ, ಖರ್ಚು-ವೆಚ್ಚದ ನಿರ್ವಹಣೆ ಬಗ್ಗೆ ಗಮನಹರಿಸಬೇಕು ಎಂದರು. ಸಭೆಯಲ್ಲಿ ಚುನಾವಣಾ ವೀಕ್ಷಕ ಶಿವಕುಮಾರ್, ಅಪರ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಉಪ ವಿಭಾಗಾಧಿಕಾರಿ ಡಾ.ಸ್ನೇಹ, ತಹಸೀಲ್ದಾರ್, ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು ಭಾಗವಹಿಸಿದ್ದರು.
ನಿಯಂತ್ರಣ ಕೊಠಡಿ:  ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಕ್ರಮ ಮದ್ಯ, ಕಳ್ಳಭಟ್ಟಿ ತಯಾರಿಕೆ, ಸರಬರಾಜು ಮತ್ತು ಮಾರಾಟದ ಮೇಲೆ ಅಬಕಾರಿ ಇಲಾಖೆ ಕಟ್ಟೆಚ್ಚರ ವಹಿಸಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮತ್ತು ಆಯಾ ತಾಲೂಕು ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ತೆರೆದು, ಮೇಲ್ವಿಚಾರಕರನ್ನು ನೇಮಿಸಿದೆ.
ಅಬಕಾರಿ ಉಪ ಆಯುಕ್ತ ಎಸ್.ಶ್ರೀನಿವಾಸಮೂರ್ತಿ ಜಿಲ್ಲಾ ನಿಯಂತ್ರಣ ಕೊಠಡಿಯ ಮೇಲ್ವಿಚಾರಕರಾಗಿದ್ದಾರೆ. ಉಪ ಅಧೀಕ್ಷಕ ಡಿ.ದೇಮಣ್ಣ ಉಪ ಮೇಲ್ವಿಚಾರಾಧಿಕಾರಿ. ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆಯು 08113-7271059, ಮೊಬೈಲಲ್ಸಂಖ್ಯೆ 9449597771, 9449597772, 9844223996 ಆಗಿದೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments