ಹಗಲಲ್ಲೂ ಝಗಮಗಿಸುವ ಬೀದಿ ದೀಪಗಳು
ದೊಡ್ಡಬಳ್ಳಾಪುರ: ನಗರಸಭೆ ಚುನಾವಣೆಯ ಭರಾಟೆ ಒಂದೆಡೆ ಎಲ್ಲರ ಗಮನ ಸೆಳೆಯುತ್ತಿದೆ. ಅಭ್ಯರ್ಥಿಗಳು ಮತದಾರರಿಗೆ ವಿವಿಧ ರೀತಿಯ ಆಮಿಷಗಳನ್ನು ಒಡ್ಡುತ್ತಿರುವುದು ಸಾಮಾನ್ಯವಾಗಿದೆ. ಆದರೆ ಇಡೀ ರಾಜ್ಯದಲ್ಲಿರುವ ವಿದ್ಯುತ್ ಬರ ಸದ್ಯಕ್ಕೆ ದೊಡ್ಡಬಳ್ಳಾಪುರಕ್ಕೆ ಇದ್ದಂತಿಲ್ಲ. ಕಾರಣ, ಶುಕ್ರವಾರ ಮಧ್ಯಾಹ್ನದ ನಂತರ ಇಲ್ಲಿನ ಶಾಂತಿನಗರ ಮುಖ್ಯರಸ್ತೆಯ ಬೀದಿದೀಪಗಳು ಹಗಲಿನ ವೇಳೆಯಲ್ಲೂ ಜಗಮಗಿಸುತ್ತಿದ್ದವು. ಸಂಜೆ 3.30ರಿಂದಲೇ ಬೀದಿ ದೀಪಗಳನ್ನು ಬೆಳಗಿಸಲಾಗಿತ್ತು. ಕಾರಣವಂತೂ ದೇವರಿಗೇ ಗೊತ್ತು. ಎಲ್ಲೆಡೆ ವಿದ್ಯುತ್ ಕೊರತೆ ದೊಡ್ಡ ಸುದ್ಧಿಯಾಗುತ್ತಿದೆ. ಆದರೆ ಇದೀಗ ಸ್ಥಳೀಯ ಸಂಸ್ಥೆ ಚುನಾವಣೆಗಳು ಘೋಷಣೆಯಾಗಿರುವ ಹಿನ್ನಲೆಯಲ್ಲಿ ಇದ್ದುದರಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿದ್ದಾರೆ. ಆದರೆ ಈ ರೀತಿ ಹಗಲಿನ ವೇಳೆಯಲ್ಲೂ ವಿದ್ಯುತ್ ದೀಪಗಳನ್ನು ಬೇಕಾಬಿಟ್ಟಿಯಾಗಿ ಬೆಳಗಿಸಿ ವಿದ್ಯುತ್ ಪೋಲು ಮಾಡುವುದು ಎಷ್ಟರಮಟ್ಟಿಗೆ ಸರಿ, ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸಿಲ್ಲವೇಕೆ ಒಂದೊಂದು ಯೂನಿಟ್ ವಿದ್ಯುತ್ ಕೂಡ ಅಮೂಲ್ಯ ಎನಿಸಿರುವಾಗ ಈ ರೀತಿಯಾಗಿ ಹತ್ತಾರು ದೀಪಗಳನ್ನು ಬೆಳಗಿಸಿ ನೂರಾರು ಯೂನಿಟ್ ವಿದ್ಯುತ್ ಪೋಲು ಮಾಡಿದರೆ ಹೇಗೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.