ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ರಾಮನಗರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಇನ್ನೂ ಉಳಿದಿದೆಯೇ?

Rashmi Kasaragodu
Updated On : 6 Mar 2013, 12:36 pm

ಕನ್ನಡಪ್ರಭ ವಾರ್ತೆ  ಚನ್ನಪಟ್ಟಣ  ಮಾ.5
ರಾಮನಗರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಇನ್ನೂ ಉಳಿದಿದೆಯೇ, ಇದು ಜಯಕರ್ನಾಟಕ ಕಾರ್ಯಕರ್ತರು ಪೊಲೀಸ್ ಇಲಾಖೆಯ ಮುಂದಿಟ್ಟಿರುವ ಪ್ರಶ್ನೆ. ಪಟ್ಟಣದ ಶೇರ್ವಾವೃತ್ತದಲ್ಲಿ ಇತ್ತೀಚಿಗೆ ಕರ್ತವ್ಯನಿರತ ಪೊಲೀಸ್ ಅಧಿಕಾರಿಯ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಜಯಕರ್ನಾಟಕ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆಯಾಗುತ್ತಿದೆ ಎಂದರೆ ಇನ್ನು ಪೊಲೀಸರು ಸಾರ್ವಜನಿಕರನ್ನು ಹೇಗೆ ರಕ್ಷಣೆ ಮಾಡುತ್ತಾರೆ ಎಂದು ತರಾಟೆಗೆ ತೆಗೆದುಕೊಂಡರು. ಸಾರ್ವಜನಿಕರ ಆಸ್ತಿಪಾಸ್ತಿ ರಕ್ಷಣೆ ಮಾಡುವ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆದಿದೆಯಾದರೂ ತಪ್ಪಿತಸ್ಥರ ವಿರುದ್ಧ ಅಧಿಕಾರಿಗಳು ಇದುವರೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಸಮಾಜಘಾತುಕ ಶಕ್ತಿಗಳನ್ನು ಹಾಗೇ ಬಿಟ್ಟಿರುವುದು ಸರಿಯೇ ಎಂದು ತರಾಟೆಗೆ ತೆಗೆದುಕೊಂಡರು. ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳನ್ನು ಬಂಧಿಸಲು ಇಲಾಖೆ ಅಧಿಕಾರಿಗಳು ಮೀನಾಮೇಷ ಏಣಿಸುತ್ತಿದ್ದು ತಪ್ಪಿತಸ್ಥರನ್ನು ಬಂಧಿಸದಂತೆ ರಾಜಕೀಯ ಒತ್ತಡವಿದೆಯೋ ಇಲ್ಲ ಇಲಾಖೆಯ ದಕ್ಷತೆ ಕ್ಷೀಣಿಸಿದೆಯೋ ಎಂದು ಪ್ರಶ್ನಿಸಿದರು. ಪೊಲೀಸ್ ಅಧಿಕಾರಿಗಳ ಮೇಲೆ ಇದೇ ರೀತಿ ಹಲ್ಲೆಗಳು ನಡೆಯುತ್ತಿದ್ದರೆ ಮುಂದಿನ ದಿನಗಳಲ್ಲಿ ನಾಗರಿಕರು ಈ ಭಾಗದಲ್ಲಿ ತಿರುಗಾಡದಂತಾಗುತ್ತದೆ. ಈ ನೆಲದಲ್ಲಿ ಕಾಣೆಯಾಗಿರುವ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹೊಣೆ ಪೊಲೀಸ್ ಅಧಿಕಾರಿಗಳದ್ದಾಗಿದೆ ಎಂದರು. ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯಕಾರ್ಯಾಧ್ಯಕ್ಷ ಪ್ರಕಾಶ್ ರೈ, ತಾಲೂಕು ಅಧ್ಯಕ್ಷ ರೇವಣ ಮುಂತಾದವರು ಉಪಸ್ಥಿತರಿದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement