ಬನ್ನೇರುಘಟ್ಟದಲ್ಲಿ ಕರಡಿ ಸಾವು
ಕನ್ನಡಪ್ರಭವಾರ್ತೆ ಆನೇಕಲ್ ಮಾ.9
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕರಡಿ ಪುನರ್ವಸತಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ನಾಗೇಶ (8) ಎಂಬ ಕರಡಿ ಶುಕ್ರವಾರ ರಾತ್ರಿ ಮೃತಪಟ್ಟಿದೆ ಎಂದು ಕಾರ್ಯ ನಿರ್ವಾಹಕ ನಿರ್ದೇಶಕ ದೇವರಾಜ್ ತಿಳಿಸಿದ್ದಾರೆ. ಕಳೆದ 6 ತಿಂಗಳಿಂದ ಶ್ವಾಸ ಕೋಶದ ಸೋಂಕಿನಿಂದ ಬಳಲುತ್ತಿದ್ದ ಕರಡಿಯನ್ನು ತೀವ್ರ ನಿಗಾ ಘಟಕದಲ್ಲಿರಿಸಿಕೊಂಡು ತಜ್ಞ ವೈದರಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಕರಡಿ ಮೃತ ಪಟ್ಟಿದೆ. ಕರಡಿಯ ಕ್ಯಾರಕಸ್ ಅನ್ನು ಪ್ರಯೋಗಾಲಯಕ್ಕೆ ಕಳಿಸಿದ್ದು ಸಾವಿಗೆ ನಿಖರ ಕಾರಣ ತಿಳಿಯಲಾಗುವುದು.