ರು. 2.5ಲಕ್ಷ ಗಳಿಗೂ ಅಧಿಕ ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿ
ಚನ್ನಪಟ್ಟಣ: ನಡುರಾತ್ರಿ ಎರಡು ಮನೆಗಳಿಗೆ ಕನ್ನ ಹಾಕಿರುವ ಕಳ್ಳರು 2.5ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ತಾಲೂಕಿನ ಚಿಕ್ಕವಿಠಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹದೇವ ಎಂಬುವರ ಮನೆಗೆ ಮೊದಲು ಕನ್ನ ಹಾಕಿದ ಕಳ್ಳರು, ನಿದ್ರೆಯಲ್ಲಿದ್ದ ಮಹದೇವು ಅವರ ಪತ್ನಿಯ ಕುತ್ತಿಗೆಯಲ್ಲಿದ್ದ ಸುಮಾರು 60ಗ್ರಾಂ ತೂಕದ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದಾರೆ. ಅದೇ ಕಳ್ಳರು ಮೂಗೀರೇಗೌಡ ಎಂಬುವರ ಮನೆಗೆ ನುಗ್ಗಿ ಪೆಟ್ಟಿಗೆಯಲ್ಲಿಟ್ಟಿದ್ದ 50 ಸಾವಿರ ರು. ನಗದು ಲಪಟಾಯಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.