ಹೊಟ್ಟೆ ನೋವು ತಾಳಲಾರದೆಆತ್ಮಹತ್ಯೆ
ಸೂಲಿಬೆಲೆ: ತನಗೆ ಬರುತ್ತಿದ್ದ ಹೊಟ್ಟೆ ನೋವು ತಾಳಲಾರದೆ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೂಲಿಬೆಲೆ ಹೋಬಳಿಯ ಇ.ಮುತ್ಸಂದ್ರ ಗ್ರಾಮದಲ್ಲಿ ನಡೆದಿದೆ. ಸುಜಾತ (34) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯ ಮುತ್ಸಂದ್ರ ಗ್ರಾಮದಲ್ಲಿ ಮಾ.2 ರಂದು ಸುಜಾತ ತನಗೆ ಬರುತ್ತಿದ್ದ ಹೊಟ್ಟೆನೋವು ತಾಳಲಾರದೆ ಮನೆಯಲ್ಲಿ ಸಿಮೇಎಣ್ಣೆಯನ್ನು ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಳು ಎನ್ನಲಾಗಿದೆ. ಬೆಂಕಿ ಜ್ವಾಲೆ ಮೈಯಲ್ಲ ಸುಟ್ಟ ತೀವ್ರ ಗಾಯಗೊಂಡಿದ್ದ ಈಕೆಯನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಸೂಲಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.