ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಜನಪ್ರಿಯ ವಿಜ್ಞಾನ ಬರವಣಿಗೆ ತರಬೇತಿ ಶಿಬಿರ

Rashmi Kasaragodu
Updated On : 14 Mar 2013, 12:35 pm

ರಾಮನಗರ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ರಾಜ್ಯದ ಉದಯೋನ್ಮುಖ ಕನ್ನಡ ವಿಜ್ಞಾನ ಬರಹಗಾರರಿಗೆ, ಕಾರ್ಯನಿರತ ವಿಜ್ಞಾನ ವರದಿಗಾರರಿಗೆ ಜನಪ್ರಿಯ ವಿಜ್ಞಾನ ಬರವಣಿಗೆಯ ತರಬೇತಿ ಶಿಬಿರ ನಡೆಸಲಿದೆ. ವಿಜ್ಞಾನ ಬರವಣಿಗೆಯಲ್ಲಿ ಆಸಕ್ತಿ ಇರುವ ಗ್ರಾಮೀಣ ವಿಭಾಗದ ವಿಜ್ಞಾನ ಶಿಕ್ಷಕರು, ಯುವ ವರದಿಗಾರರು, ಚಿತ್ರ ನಿರೂಪಕರು, ರೇಡಿಯೋ ಭಾಷಣಕಾರರು ಮತ್ತಿತರ ಆಸಕ್ತರು ಶಿಬಿರದಲ್ಲಿ ಭಾಗವಹಿಸಬಹುದು. ಶಿಬಿರವು ಏ.1 ಅಥವಾ 2ನೇ ವಾರದಲ್ಲಿ ಐದು ದಿನಗಳ ಕಾಲ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ. ನುರಿತ ವಿಜ್ಞಾನ ಬರಹಗಾರರು, ಸಂಪಾದಕರು, ಸಂವಹನಕಾರರಿಂದ ಶಿಬಿರಾರ್ಥಿಗಳಿಗೆ ವಿಜ್ಞಾನ ಬರವಣಿಗೆ ಕುರಿತ ವಿವಿಧ ಕೌಶಲ್ಯ, ಆಕರಗಳು, ಶಬ್ದ-ಬಳಕೆ, ಅನುವಾದ, ವಿಜ್ಞಾನ ಪತ್ರಿಕೋದ್ಯಮ, ಸಂವಹನ ವಿಧಾನಗಳು ಮುಂತಾದ ಕ್ಷೇತ್ರಗಳಲ್ಲಿ ತರಬೇತಿ ನೀಡಲಾಗುವುದು. ಶಿಬಿರಾರ್ಥಿಗಳಾಗಿ ಭಾಗವಹಿಸಲಿಚ್ಛಿಸುವವರು ವಿಜ್ಞಾನ ಸಂವಹನದಲ್ಲಿ ವಿಶೇಷ ಆಸಕ್ತಿ ಹೊಂದಿರಬೇಕು. ಶಿಬಿರದಲ್ಲಿ ಭಾಗವಹಿಸಲು ವ್ಯಕ್ತಿಗತ ವಿವರಗಳೊಂದಿಗೆ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಒಂದು ಸ್ವರಚಿತ ಲೇಖನವನ್ನು ಅರ್ಜಿಯ ಜೊತೆಯಲ್ಲಿ ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಭವನ, ನಂ.24ಣ2, 21ನೇ ಮುಖ್ಯರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು-560 070 ಈ ವಿಳಾಸಕ್ಕೆ ಮಾ.25ರೊಳಗೆ ತಲುಪಿಸಬೇಕು.  ಹೆಚ್ಚಿನ ಮಾಹಿತಿಗೆ ರಾಜ್ಯ ಸಂಯೋಜಕ ಪ್ರೊ.ಎಸ್.ವಿ.ಸಂಕನೂರ ಅವರ ಮೊ.9448301983 ಸಂಪರ್ಕಿಸಬಹುದು. ಈ ಹಿಂದೆ ಕರಾವಿಪ ಸಂಘಟಿಸಿದ್ದ ಲೇಖಕರ ತರಬೇತಿ ಶಿಬಿರಗಳಲ್ಲಿ ಭಾಗವಹಿಸಿದ್ದವರು ಅರ್ಜಿ ಸಲ್ಲಿಸುವಂತಿಲ್ಲ. ಸ್ವೀಕೃತ ಅರ್ಜಿಗಳನ್ನು ರಾಜ್ಯ ಪರಿಣಿತರ ಸಮಿತಿಯಿಂದ ಪರಿಶೀಲನೆಗೆ ಒಳಪಡಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ವಿಜ್ಞಾನ ಪರಿಷತ್ತಿನಿಂದ ಉಚಿತ ಊಟ, ವಾಸ್ತವ್ಯದ ವ್ಯವಸ್ಥೆಮಾಡಲಾಗುವುದು ಮತ್ತು ಎರಡನೇ ದರ್ಜೆ ರೈಲು, ಸಾಮಾನ್ಯ ಬಸ್ಸಿನ ಪ್ರಯಾಣ ಭತ್ಯೆ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕಾರ್ಯದರ್ಶಿ ಡಾ.ವಸುಂದರಾ ಭೂಪತಿ ತಿಳಿಸಿದ್ದಾರೆ.
'ಬಿಜೆಪಿಗೆ ತಕ್ಕ ಪಾಠ'
ಚಿಕ್ಕಬಳ್ಳಾಪುರ: ಸ್ವಜನ ಪಕ್ಷಪಾತ, ವ್ಯಾಪಕ ಭ್ರಷ್ಟಾಚಾರ, ಭಿನ್ನಾಭಿಪ್ರಾಯಗಳಿಂದ ರಾಜ್ಯದ ಅಭಿವೃದ್ಧಿ ಮರೆತು ನಡೆದುಕೊಂಡ ಹಿನ್ನೆಲೆಯಲ್ಲಿ ಜನರು ಸ್ಥಳೀಯ ಆಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕೇಂದ್ರ ನೈಸರ್ಗಿಕ ಅನಿಲ ಮತ್ತು ಪೆಟ್ರೋಲಿಯಂ ಖಾತೆ ಸಚಿವ ಎಂ.ವೀರಪ್ಪ ಮೊಯ್ಲಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement