ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಲಕ್ಷಾಂತರ ಹಾನಿ
ಕ.ಪ್ರವಾರ್ತೆ ್ಣ ಕೋಲಾರ ್ಣ ಮಾ.13
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಮನೆಗೆ ಬೆಂಕಿ ಬಿದ್ದು ಸುಮಾರು 2 ಲಕ್ಷ ನಷ್ಟವಾಗಿರುವ ಘಟನೆ ತಾಲೂಕಿನ ಬೆಳಗಾನಹಳ್ಳಿ ಗ್ರಾಮದಲ್ಲಿ ಜರುಗಿದೆ.
ಗ್ರಾಮದ ಬಿ.ಸಿ.ಶ್ರೀನಿವಾಸ್ ಎಂಬವರ ಮನೆಯಲ್ಲಿ ಮಂಗಳವಾರ ಶಾರ್ಟ್ ಸರ್ಕ್ಯೂರ್ಟ್ನಿಂದಾಗಿ ಗೃಹೋಪಯೋಗಿ ವಸ್ತುಗಳು, ವ್ಯವಸಾಯ ಉಪಕರಣಗಳು ಸುಮಾರು 30 ಸಾವಿರದಷ್ಟು ನಗದು ಸೇರಿದಂತೆ 2ಲಕ್ಷ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಅಗ್ನಿಶಾಮಕ ದಳ ಸಿಬ್ಬಂದಿ ಹೆಚ್ಚಿನ ಶ್ರಮ ವಹಿಸಿ ಮುಂದಾಗುವ ಅನಾಹುತ ತಡೆದಿದ್ದಾರೆ. ಸ್ಥಳಕ್ಕೆ ಕಂದಾಯಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದರು.