ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

19ರಂದು ಸರ್ಕಾರಿ ನೌಕರರ ಕ್ರೀಡಾಕೂಟ

Rashmi Kasaragodu
Updated On : 17 Mar 2013, 12:25 pm

ಮಾಗಡಿ: ರಾಜ್ಯ ಸರ್ಕಾರಿ ನೌಕರರ ಸಂಘದ ಮಾಗಡಿ ಶಾಖೆ  ವತಿಯಿಂದ ಸರ್ಕಾರಿ ನೌಕರರ ಕ್ರೀಡಾಕೂಟ ಮಾ.19 ರಂದು ಮಂಗಳವಾರ  ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ  ಬಿ.ಎನ್. ಜಯರಾಮು  ತಿಳಿಸಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ಅನ್ಯ ಕಾರ್ಯನಿಮಿತ್ತ ರಜೆ ಸೌಲಭ್ಯವಿರುತ್ತದೆ ಎಂದು  ಸಂಘದ ಅಧ್ಯಕ್ಷ ಗುಣಶೇಖರ್ ತಿಳಿಸಿದರು.  ಶಾಸಕ ಎಚ್.ಸಿ. ಬಾಲಕೃಷ್ಣ  ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ.ಬಿ. ಗುಣಶೇಖರ್  ಅಧ್ಯಕ್ಷತೆ ವಹಿಸಲಿದ್ದಾರೆ. ಜಿ.ಪಂ. ಅಧ್ಯಕ್ಷ ಕೆ.ಮುದ್ದರಾಜ ಯಾದವ್, ತಾ.ಪಂ. ಅಧ್ಯಕ್ಷ ಬಿ.ಟಿ.ವೆಂಕಟೇಶ್, ತಹಸೀಲ್ದಾರ್  ಡಾ.ಹರೀಶ್ ನಾಯಕ್, ಬಿಇಓ ಆರ್. ರಂಗಸ್ವಾಮಿ, ಮಲ್ಲೂರು ಲೋಕೇಶ್, ರಾಜ್ಯ ಪರಿಷತ್ ಸದಸ್ಯ ಸಿ. ಬೆಟ್ಟಸ್ವಾಮಿ, ಎಂ.ವಿ. ರಮೇಶ್  ಇತರರು  ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement