ಡಾ. ಪರಮೇಶ್ವರ ಶುಭ ಹಾರೈಕೆ
ಬೆಂಗಳೂರು: ಆದಿಚುಂಚನಗಿರಿ ಮಠದ ನೂತನ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ಸ್ವಾಮೀಜಿಯವರನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಭೇಟಿ ಮಾಡಿ ಶುಭ ಕೋರಿದರು. ಇತ್ತೀಚೆಗೆ ದೈವಾಧೀನರಾದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಸಾಮಾಜಿಕ ಹಾಗೂ ಶೈಕ್ಷಣಿಕ ಸೇವೆಗಳನ್ನು ಈ ಸಂದರ್ಭದಲ್ಲಿ ನೆನಪಿಸಿಕೊಂಡ ಪರಮೇಶ್ವರ ಅವರು ನೂತನ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮಠವು ಇನ್ನಷ್ಟು ಉತ್ತುಂಗದಲ್ಲಿ ಬೆಳೆಯಲಿ ಎಂದು ಆಶಿಸಿದರು.ಹಿಂದಿನ ಶ್ರೀಗಳು ತಮ್ಮ ರಾಜಕೀಯ ಹಾಗೂ ಸಾಮಾಜಿಕ ಚಟುವಟಿಕೆಯಲ್ಲಿ ಸಲಹೆ, ಸೂಚನೆ ನೀಡುತ್ತಿದ್ದರು ಎಂದರು.