ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಪರೀಕ್ಷೆ ಭೂತವಲ್ಲ, ಭಯಪಡದಿರಿ

Rashmi Kasaragodu
Updated On : 18 Mar 2013, 12:55 pm

ರಾಮನಗರ: ಪರೀಕ್ಷೆ ಭೂತವಲ್ಲ, ಭಯಪಡದೆ ಸಂತೋಷದಿಂದ ಅನುಭವಿಸಿದರೆ ಉತ್ತಮ ಅಂಕ ಗಳಿಸಲು ಸಾಧ್ಯವಾಗುತ್ತದೆ ಎಂದು ಚೇತನ್ ರಾವ್ ತಿಳಿಸಿದರು. ನಗರದ ಶಾಂತಿನಿಕೇತನ ಶಾಲೆಯಲ್ಲಿ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ನಡೆದ ಪರೀಕ್ಷೆ ಒಂದು ಹಬ್ಬ, ಸಂಭ್ರಮಿಸೋಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಸ್ತನ್ನು ಮೈಗೂಡಿಸಿಕೊಂಡು, ವೇಳಾ ಪಟ್ಟಿ ಹಾಕಿಕೊಂಡು ಆಯಾ ದಿನದ ಪಾಠವನ್ನು ಅಂದೇ ಮನನ ಮಾಡಿಕೊಳ್ಳಬೇಕು. ನಿರ್ದಿಷ್ಟ ಗುರಿ ಇರಿಸಿಕೊಂಡು ಶ್ರಮಪಟ್ಟು ಓದಿದರೆ ಉನ್ನತ ದರ್ಜೆಯಲ್ಲಿ ಉತ್ತೀರ್ಣರಾಗಬಹುದು ಎಂದು ತಿಳಿಸಿದರು. ್ಲ ಡಿಡಿಪಿಐ ಪ್ರಹ್ಲಾದ್ ಗೌಡ, ಬಿಇಒ ಮುನಿಕೆಂಪೇಗೌಡ, ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಆರ್. ಕುಮಾರಸ್ವಾಮಿ, ರೋಟರಿ ಸಂಸ್ಥೆ ಅಧ್ಯಕ್ಷ ಆರ್.ವಿ. ಸುರೇಶ್, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement