ಪೊಲೀಸರಿಗೆ ಆರೋಗ್ಯದೆಡೆಯೂ ಗಮನ ಅಗತ್ಯ
ಬೆಂಗಳೂರು: ಪೊಲೀಸ್ ಸಿಬ್ಬಂದಿ ಕರ್ತವ್ಯದ ಜತೆಗೆ ತಮ್ಮ ಆರೋಗ್ಯದ ಕಡೆಯೂ ಹೆಚ್ಚಿನ ಗಮನ ಕೊಡಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಲಾಲ್ ರುಖಾಮ್ ಪಚಾವೋ ಹೇಳಿದ್ದಾರೆ.
ಮೈಸೂರು ರಸ್ತೆ ಸಿರ್ಸಿ ವೃತ್ತದಲ್ಲಿರುವ ಸಿಎಆರ್ ಮೈದಾನದಲ್ಲಿ ನಡೆದ “eæç«Ú ಸಮಾಜ ಯುವ ಮತ್ತು ಮಹಿಳಾ ÈÚVÚ%’ ಆಯೋಜಿಸಿದ್ದ ಉಚಿತ ನೇತ್ರಾ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದ ಪೊಲೀಸ್ ಮುಖ್ಯಸ್ಥ ಪಚಾವೋ, ಪೊಲೀಸರು ಯಾವಾಗಲೂ ತಮ್ಮ ಕೆಲಸದಲ್ಲಿ ಹೆಚ್ಚಾಗಿ ನಿರತರಾಗಿರುತ್ತಾರೆ. ಅವರು ತಮ್ಮ ಆರೋಗ್ಯ ಹಾಗೂ ಕುಟುಂಬದ ಕಡೆಯೂ ಹೆಚ್ಚಿನ ಗಮನ ಹರಿಸಬೇಕು. ಆರೋಗ್ಯ ಸ್ಥಿತಿ ಹದಗೆಡುವ ಮುನ್ನಾ ತಪಾಸಣೆ ಮಾಡಿಸಿಕೊಳ್ಳಬೇಕು. ಈ ಮೂಲಕ ಅನಾರೋಗ್ಯಕ್ಕೆ ತುತ್ತಾಗುವ ಮುನ್ನ ಎಚ್ಚರ ವಹಿಸಬೇಕು ಎಂದು ಹೇಳಿದರು.
ಇದೇ ವೇಳೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಜ್ಯೋತಿಪ್ರಕಾಶ್ ಮಿರ್ಜಿ, ಜೈನ ಸಮುದಾಯ ಆಯೋಜಿಸಿರುವ ಉಚಿತ ನೇತ್ರಾ ತಪಾಸಣಾ ಶಿಬಿರದಿಂದ ನೂರಾರು ಪೊಲೀಸ್ ಹಾಗೂ ಅವರ ಕುಟುಂಬ ಸದಸ್ಯರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಿದ್ದು, ಅವರ ಕಾರ್ಯ ಶ್ಲಾಘನೀಯ ಎಂದರು. ಮುಂದಿನ ದಿನಗಳಲ್ಲಿ ಶಿಬಿರಗಳನ್ನು ಸಿಎಆರ್ ಮೈದಾನದಲ್ಲೆ ಆಯೋಜಿಸಲು ಶಾಶ್ವತ ವ್ಯವಸ್ಥೆ ಕಲ್ಪಿಸುವ ಬಗ್ಗೆ ಚಿಂತಿಸಲಾಗುವುದು ಎಂದು ತಿಳಿಸಿದರು.
ಉಚಿತ ಶಿಬಿರದಲ್ಲಿ ಭಾನುವಾರ ಒಂದೇ ದಿನ 2,400 ಜನ ತಪಾಸಣೆ ಮಾಡಿಸಿಕೊಂಡಿದ್ದಾರೆ. ಈ ಪೈಕಿ ಸುಮಾರು 500 ಪೊಲೀಸರು ಹಾಗೂ ಕುಟುಂಬ ಸದಸ್ಯರು ತಪಾಸಣೆ ಮಾಡಿಸಿಕೊಂಡಿದ್ದಾರೆ. 1150 ಜನರಿಗೆ ಕನ್ನಡಕದ ಅಗತ್ಯವಿತ್ತು. ಸ್ಥಳದಲ್ಲೇ 700 ಕನ್ನಡಕಗಳನ್ನು ವಿತರಿಸಲಾಗಿದ್ದು 450 ಸಿದ್ದಪಡಿಸಬೇಕಿರುವ ಕಾರಣ ಸ್ವಲ್ಪ ತಡವಾಗಿ ವಿತರಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ಇನ್ನು ಒಟ್ಟು 130 ಜನರಿಗೆ ನೇತ್ರದ ಶಸ್ತ್ರ ಚಿಕಿತ್ಸೆ ಅಗತ್ಯವಿದ್ದು ಭಾನುವಾರವೇ 30 ಜನರಿಗೆ ಶಸ್ತ್ರ ಚಿಕಿತ್ಸೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದ್ದು ಉಳಿದವರಿಗೆ ಹಂತ ಹಂತವಾಗಿ ಶಸ್ತ್ರ ಚಿಕಿತ್ಸೆ ನಡೆಸುವುದಾಗಿ ಸಂಘಟಕರು ತಿಳಿಸಿದ್ದಾರೆ.
ನಗರ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ರೂಪಾ.ಡಿ, ರಂಕಾ ಸ್ಟೀಲ್ನ ಬಾಬುಲಾಲ್ ರಂಕಾ, ಸೋಲಂಕಿ ಕಣ್ಣಾಸ್ಪತ್ರೆ - ದೃಷ್ಟಿ ಯೋಜನೆ ಅಧ್ಯಕ್ಷ ಡಾ. ನರ್ಪತ್ ಸೋಲಂಕಿ ಮುಂತಾದವರು ಹಾಜರಿದ್ದರು.